ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಪಂಚಭಾಷಾ ತಾರೆ, ಅಭಿನಯ ಶಾರದೆ ಎಂದು ಎಂದು ತಮ್ಮ ಅಭಿಮಾನಿಗಳಿಂದ ಬಿರುದು ಪಡೆದಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ನಿಧನರಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JuGWeyX4Ce
— B.S. Yediyurappa (@BSYBJP) July 26, 2021
ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಜಯಂತಿ ಅವರು, ಡಾ. ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ.

ವೈ. ಆರ್. ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ ಸಿನಿ ಜೀವನ ಪ್ರಾರಂಭ ಮಾಡಿದರು. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು, ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು.
ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ..
ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ..
ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ
ಅವಕಾಶಸ pic.twitter.com/oWIi2kkBEa— ನವರಸನಾಯಕ ಜಗ್ಗೇಶ್ (@Jaggesh2) July 26, 2021
ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಿರ್ದೇಶನದ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿದೆ.
6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದ ನಟಿ ಜಯಂತಿ ಅವರು, 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಜೇನುಗೂಡು, ಬೆಟ್ಟದ ಹುಲಿ, ಎಡಕಲ್ಲು ಗುಡ್ಡದ ಮೇಲೆ, ಕಸ್ತೂರಿ ನಿವಾಸ ಮೊದಲಾದವು ಅವರ ಪ್ರಮುಖ ಚಿತ್ರಗಳು. ಕನ್ನಡದಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮೊದಲಾದ ಪ್ರಸಿದ್ಧ ನಾಯಕರ ಚಿತ್ರಗಳಲ್ಲಿ ನಟಿಸಿದ್ದರು.
ಹಿರಿಯ ನಟಿ, ಅಭಿನಯ ಶಾರದೆ ಶ್ರೀಮತಿ ಜಯಂತಿ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 6 ಭಾಷೆಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಒನಕೆ ಓಬವ್ವ ರೀತಿಯ ಪೌರಾಣಿಕ ಪಾತ್ರ ಸೇರಿದಂತೆ ಅನೇಕ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/L0VPderxlL
— Dr Sudhakar K (@mla_sudhakar) July 26, 2021
‘ಅಭಿನಯ ಶಾರದೆ’ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ.
ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ.ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ. pic.twitter.com/yRnQwhsp0w— H D Kumaraswamy (@hd_kumaraswamy) July 26, 2021
ಗಣ್ಯರ ಸಂತಾಪ:
ಹಿರಿಯ ನಟಿ ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸಚಿವ ಡಾ. ಸುಧಾಕರ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ನಟ ಜಗ್ಗೇಶ್ ಸೇರಿದಂತೆ ಹಲವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post