ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ Mandya Ravi ನಿಧನರಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಟಿ.ಎನ್. ಸೀತಾರಾಮ್ ಅವರ ಬಹಳಷ್ಟು ಧಾರವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ಇವರು ಕನ್ನಡ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದರು. ಮಾತ್ರವಲ್ಲದೆ ಕನ್ನಡದ ಕೆಲ ಚಲನಚಿತ್ರದಲ್ಲೂ ಅಭಿನಯಿಸಿದ್ದರು. ಇವರ ನಿಧನದಿಂದ ಕನ್ನಡ ಕಿರುತೆರೆಗೆ ಅಪಾರ ನಷ್ಟವುಂಟಾಗಿದೆ.
ರವಿ ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತಾ, ನಂತರ ಬಣ್ಣದ ಲೋಕದತ್ತ ಒಲವು ಬೆಳೆಸಿಕೊಂಡವರು. ಓದಿದ್ದು ಎಂಎ ಇಂಗ್ಲಿಷ್ ಮತ್ತು ಎಲ್‍ಎಲ್‍ಬಿ ಆದರೂ, ಆಯ್ಕೆ ಮಾಡಿಕೊಂಡ ವೃತ್ತಿ ಮಾತ್ರ ನಟನೆ. 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ, ಅಲ್ಲಿಂದ ಟಿ.ಎಸ್. ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಜಗತ್ತಿಗೆ ಕಾಲಿಟ್ಟರು.
ಮೊದಲು ಬ್ರೇಕ್ ನೀಡಿದ ಧಾರಾವಾಹಿ ಮಿಂಚು, ನಂತರ ಮುಕ್ತಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್ ಸೇರಿದಂತೆ ಸಾಕಷ್ಟು ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರಸಾರವಾದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದ ಮೂಲಕ ರವಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post