ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂತಾರ ಚಿತ್ರ ವಿಶ್ವ ವಿಖ್ಯಾತವಾದ ಬೆನ್ನಲ್ಲೇ ಕಾಂತಾರ ಚಾಪ್ಟರ್ 1 #Kantara Chapter 1 ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದ್ದು, ಭಾರೀ ಕುತೂಹಲ ಕೆರಳಿಸಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ #Rishab Shetty ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ ಚಾಪ್ಟರ್ 1 ಚಿತ್ರ ಅಕ್ಟೋಬರ್ 2ರಂದು ತೆರೆಗೆ ಬರಲು ಸಜ್ಜಾಗುತ್ತಿದೆ.
ಈ ಕುರಿತಂತೆ ಹೊಂಬಾಳೆ ಫಿಲಂಸ್ #Hombale Films ಮಾಹಿತಿ ಹಂಚಿಕೊಂಡಿದ್ದು, ಏಕಕಾಲಕ್ಕೆ 7 ಭಾಷೆಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ.
ಈ ಬಾರಿ ಅಕ್ಟೋಬರ್ 2ರ ಗಾಂಧಿ ಜಯಂತಿ ಗುರುವಾರ ಬಂದಿದೆ. ಹೀಗಾಗಿ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸಿನಿಮಾ ಸಹಜವಾಗಿಯೇ ಒಳ್ಳೆಯ ಕಲೆಕ್ಷನ್ ಮಾಡಲಿದೆ ಎಂದು ಹೇಳಲಾಗಿದೆ.
ಆ ಬಳಿಕ ಅಕ್ಟೋಬರ್ ಮಧ್ಯದಲ್ಲಿ ದೀಪಾವಳಿ ಬರಲಿದ್ದು, ಇದು ಕೂಡ ಸಿನಿಮಾಗೆ ಸಹಕಾರಿ ಆಗಲಿದೆ. ಅದಕ್ಕೆ ತಕ್ಕಂತೆ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ನಿಗದಿತ ದಿನಾಂಕದAದೇ ಸಿನಿಮಾ ರಿಲೀಸ್ ತೆರೆಗೆ ಬರುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಹುಟ್ಟುಹಬ್ಬದ ದಿನವೇ ರಿಷಬ್’ಗೆ ಭರ್ಜರಿ ಉಡುಗೊರೆ ನೀಡಿರುವ ಚಿತ್ರತಂಡ ¨ದಂತಕಥೆಯ ಮುನ್ನುಡಿ ಆ ನುಡಿಗೊಂದು ಪರಿಚಯ ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ. ಎನ್ನುವ ಸಾಲಿನೊಂದಿಗೆ ವಿಶೇಷ ಪೋಸ್ಟರ್’ವೊಂದನ್ನು ಹಂಚಿಕೊಂಡಿದೆ.
ಈ ಅದ್ಧೂರಿ ಪೋಸ್ಟರ್’ನಲ್ಲಿ ರಿಷಬ್ ಶೆಟ್ಟಿ ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ. ಹಿಂಭಾಗದಲ್ಲಿ ಬೆಂಕಿ ಇದೆ. ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಎದ್ದು ಕಾಣುತ್ತಿದೆ. ರಕ್ತಸಿಕ್ತ ಅವತಾರದಲ್ಲಿ ಘರ್ಜಿಸುತ್ತಿರುವ ರಿಷಬ್ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post