No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇವಿ ಚಾರ್ಜಿಂಗ್ ದೇಶದಲ್ಲೇ ಮುಂಚೂಣಿ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ ಮುಡಿಗೆ

ರಾಜ್ಯದಲ್ಲಿವೆ 5,765 ಇವಿ ಚಾರ್ಚಿಂಗ್ ಸ್ಟೇಷನ್‌: ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ವರದಿ

kalpa News by kalpa News
August 20, 2024
in ಬೆಂಗಳೂರು ನಗರ
0
Karnataka Leads the Nation with 5,765 Public EV Charging Stations: Report
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಎಲೆಕ್ಟ್ರಿಕ್‌ ವಾಹನಗಳ #Electric Vehicle ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್‌ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಅಂಕಿ ಅಂಶಗಳ ಪ್ರಕಾರ, 5,765 ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳಿರುವ ಕರ್ನಾಟಕವು ರಾಷ್ಟ್ರದಲ್ಲಿ ಮೊದಲ ಸ್ಥಾನದಲ್ಲಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಬದ್ಧತೆಯನ್ನು ಈ ಸಾಧನೆ ಎತ್ತಿ ತೋರಿಸುತ್ತದೆ. ಜತೆಗೆ ರಾಜ್ಯದ ಇವಿ ನೀತಿಯು ಇವಿ ಬಳಕೆದಾರರು, ವಾಹನ ಉತ್ಪಾದಕರಿಗೆ ಪೂರಕವಾಗಿದೆ.– ಕೆ.ಜೆ. ಜಾರ್ಜ್, ಇಂಧನ ಸಚಿವರು

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ದೂರದೃಷ್ಟಿಯ ಫಲವಾಗಿ, ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ವಾಹನಗಳಿಗೆ ಚಾರ್ಚಿಂಗ್‌ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ರಾಜ್ಯದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್‌ ಏಜೆನ್ಸಿಯಾಗಿದೆ. ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಜಾಲ ವಿಸ್ತರಣೆ ಮತ್ತು ಉತ್ತಮ ನಿರ್ವಹಣೆಗೆ ಶ್ರಮಿಸುತ್ತಿರುವ ಬೆಸ್ಕಾಂನ ಜವಾಬ್ದಾರಿಯನ್ನು ಈ ವರದಿ ಮತ್ತಷ್ಟು ಹೆಚ್ಚಿಸಿದೆ.
– ಮಹಾಂತೇಶ ಬಿಳಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಎಲೆಕ್ಟ್ರಿಕ್ ವಾಹನ ವಲಯದಲ್ಲಿ ಒಂದು ಹೆಜ್ಜೆ ಸದಾ ಮುಂದಿರುವ ಕರ್ನಾಟಕ, 2017ರಲ್ಲಿ ಇವಿ ನೀತಿಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿದೆ. 2021ರಲ್ಲಿ ಹೆಚ್ಚುವರಿ ಪ್ರೋತ್ಸಾಹದೊಂದಿಗೆ ಈ ನೀತಿಯನ್ನು ಪರಿಷ್ಕರಿಸಲಾಯಿತು. ಇದಲ್ಲದೇ, ಎಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಗಣನೀಯವಾಗಿ ಹೆಚ್ಚಿಸುವ ಕಾರ್ಯತಂತ್ರದ ಕ್ರಮವಾಗಿ ಸರ್ಕಾರವು ರಾಜ್ಯಾದ್ಯಂತ ಮಾದರಿ ಇವಿ ನಗರಗಳನ್ನು ಅಭಿವೃದ್ಧಿಪಡಿಸಲು ಸಜ್ಜಾಗಿದೆ.
ವರದಿಯ ಪ್ರಕಾರ, ಇವಿ ಚಾರ್ಜಿಂಗ್ ಸ್ಟೇಷನ್ #EV Charging Station ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳ ಪೈಕಿ ಶೇ. 85ರಷ್ಟು.

Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನಾ ವೈಭವ

ವರದಿ ಹೇಳುವಂತೆ 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ- 1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ. ತಮಿಳುನಾಡಿನಲ್ಲಿ 1,413, ಕೇರಳ- 1,212 ಮತ್ತು ರಾಜಸ್ಥಾನ- 1,129, ಗುಜರಾತ್- 992, ತೆಲಂಗಾಣ- 956, ಪಶ್ಚಿಮ ಬಂಗಾಳ- 763, ಹರಿಯಾಣ- 709, ಮತ್ತು ಆಂಧ್ರಪ್ರದೇಶ 601 ಸ್ಟ್ರೇಷನ್‌ಗಳನ್ನು ಹೊಂದಿವೆ.

https://kalpa.news/wp-content/uploads/2024/04/VID-20240426-WA0008.mp4

ಇವಿ ಚಾರ್ಜಿಂಗ್ ಸ್ಟೇಷನ್‌ಗಳಿಗೆ ವಿವಿಧ ಮೂಲಗಳಿಂದ ಆರ್ಥಿಕ ಬೆಂಬಲ ದೊರೆತಿದ್ದು, ಇವುಗಳಲ್ಲಿ ಕೇಂದ್ರ ಸರ್ಕಾರದ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್ (FAME) ಯೋಜನೆ, ಬೆಸ್ಕಾಂನ ಹೂಡಿಕೆ, ರಾಜ್ಯ ಸಾರಿಗೆ ಇಲಾಖೆಯಿಂದ ಹಸಿರು ಸೆಸ್ ನಿಧಿ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಹೂಡಿಕೆಗಳು ಸೇರಿವೆ.

ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ 2024ರ ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದೆ. ಇದಲ್ಲದೇ, ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರವು 35 ಕೋಟಿ ರೂ. ಹೂಡಿಕೆ ಮಾಡಲು ಯೋಜಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreElectric vehicleEV Charging StationKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಇವಿ ಚಾರ್ಜಿಂಗ್ ಸ್ಟೇಷನ್ಎಲೆಕ್ಟ್ರಿಕ್‌ ವಾಹನಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನಾ ವೈಭವ

Next Post

ಈತ ಐವನ್ ಅಲ್ಲ ಹೈವಾನ್, ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ: ಶಾಸಕ ಚನ್ನಬಸಪ್ಪ

kalpa News

kalpa News

Next Post
ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ

ಈತ ಐವನ್ ಅಲ್ಲ ಹೈವಾನ್, ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ: ಶಾಸಕ ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL