Sunday, August 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

2022ನೇ ವರ್ಷ ಆರೋಗ್ಯ ವಲಯದಲ್ಲಿ ಕರ್ನಾಟಕ ಮಾದರಿ ರಾಜ್ಯ: ಸಚಿವ ಸುಧಾಕರ್‌

January 5, 2023
in ಬೆಂಗಳೂರು ನಗರ
0 0
0
File image

File image

Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

2022 ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವರ್ಷವಾಗಿದ್ದು, ಅನೇಕ ಗಮನಾರ್ಹ ಸಾಧನೆಗಳಾಗಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ತಿಳಿಸಿದ್ದಾರೆ.

ವರ್ಷದ ಸಾಧನೆಗಳ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಎಲ್ಲರಿಗೂ ಆರೋಗ್ಯದ ಹಕ್ಕು ನೀಡಲಾಗಿದೆ. ಕರ್ನಾಟಕವು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಆರೋಗ್ಯ ವಲಯದಲ್ಲಿ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಯಾವುದೇ ರಾಜ್ಯದ ಆರೋಗ್ಯದ ಮಾನದಂಡ ಅಳೆಯಲು ತಾಯಿ ಮತ್ತು ಶಿಶು ಮರಣ ಅಳತೆಗೋಲು. ತಾಯಿ ಶಿಶು ಮರಣ ದರ ಶೇ 83 ರಿಂದ 69ಕ್ಕೆ, ಎನ್.ಎಫ್.ಎಚ್.ಎಸ್ -5 ವರದಿ ಪ್ರಕಾರ, ಜನನದ ಸಮಯದಲ್ಲಿ ಲಿಂಗಾನುಪಾತ 910 ರಿಂದ 978 ಕ್ಕೆ, ಶಿಶು ಮರಣ ದರ 21 ರಿಂದ 19ಕ್ಕೆ, ನವಜಾತ ಶಿಶುಗಳ ಮರಣ ದರ 16 ರಿಂದ 14ಕ್ಕೆ ತಗ್ಗಿದೆ. ಹೆರಿಗೆ ವಲಯದಲ್ಲೂ ಸುಧಾರಣೆಯಾಗಿದ್ದು, 97% ರಷ್ಟು ಸಾಂಸ್ಥಿಕ ಹೆರಿಗೆಗಳು ದಾಖಲಾಗಿರುವುದು ಮಹತ್ವದ ಸಂಗತಿ. ʼಕಿವುಡ ಮುಕ್ತ ಕರ್ನಾಟಕʼದಡಿ ನವಜಾತ ಶಿಶುಗಳಲ್ಲಿ ಶ್ರವಣದೋಷ ಪತ್ತೆ ಮಾಡಿ ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸಲಾಗುತ್ತಿದೆ ಎಂದರು.

ಲಕ್ಷ್ಯ ಕಾರ್ಯಕ್ರಮದಡಿ 68% ಆಸ್ಪತ್ರೆಗಳಿಗೆ ಮಾನ್ಯತೆ ನೀಡಿ, 55 ಸೌಲಭ್ಯಗಳನ್ನು ರಾಷ್ಟ್ರ ಮಟ್ಟದಲ್ಲಿ ಪ್ರಮಾಣೀಕರಿಸಲಾಗಿದೆ. 42,524 ಆಶಾ ಕಾರ್ಯಕರ್ತೆಯರಿಗೆ ಮಂಜೂರಾತಿ, ವಿಶ್ವ ಆರೋಗ್ಯ ಸಂಸ್ಥೆ ಪೋರ್ಟಲ್‌ನಲ್ಲಿ ಅನುಷ್ಠಾನ ಮತ್ತು ವರದಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದು, ಇ-ಸಂಜೀವಿನಿ ಟೆಲಿ-ಮೆಡಿಸಿನ್ ಸಮಾಲೋಚನೆಯಡಿ ದೇಶದಲ್ಲಿ 3ನೇ ಸ್ಥಾನದಲ್ಲಿದೆ. ಹೊರರೋಗಿ ಮಾದರಿಯ ಟೆಲಿ-ಸಮಾಲೋಚನೆಯಲ್ಲಿ ಮೊದಲ ಸ್ಥಾನದಲ್ಲಿದ್ದು, ನವೆಂಬರ್‌ವರೆಗೆ 61.99 ಲಕ್ಷ ಟೆಲಿ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.
ಇ-ಮನಸ್‌:
ರಾಜ್ಯ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆಯ ಇ-ಮನಸ್ ನ ಮಾನಸಿಕ ಆರೋಗ್ಯ ಕಾರ್ಯಕ್ರಮದ ಟೆಲಿ ಸಮಾಲೋಚನೆಯಡಿ ಮಹತ್ವದ ಸಾಧನೆಯಾಗಿದೆ. ಗುಜರಾತ್ ನಲ್ಲಿ ಮೇ ನಲ್ಲಿ ನಡೆದ “ಸ್ವಾಸ್ಥ್ಯ ಚಿಂತನ ಶಿಬಿರ”ದಲ್ಲಿ ಇ-ಮನಸ್ ಕುರಿತು ರಾಜ್ಯದ ಅತ್ಯುತ್ತಮ ಅಭ್ಯಾಸಗಳನ್ನು ಪ್ರಸ್ತುತಪಡಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ತಜ್ಞರ ಸೇವೆಯನ್ನು ಬಡವರಿಗೆ ಒದಗಿಸಲು ಮತ್ತು ವೈದ್ಯರಿಂದ ತ್ವರಿತ ಸಲಹೆ ಮತ್ತು ಚಿಕಿತ್ಸೆ ಪಡೆಯಲು ಟೆಲಿ ಮೆಡಿಸನ್ ವ್ಯವಸ್ಥೆಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಾರಿಗೊಳಿಸಲಾಗಿದೆ. 32,00 ಸಾಮಾನ್ಯ ವೈದ್ಯರು, 600 ತಜ್ಞ ವೈದ್ಯರು ಮತ್ತು 100 ಸೂಪರ್ ಸ್ಪೆಷಾಲಿಟಿ ವೈದ್ಯರು ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪಾಳಿಗಳಲ್ಲಿ ವೈದ್ಯಕೀಯ ಸಲಹೆಗಳನ್ನು ನೀಡುತ್ತಿದ್ದಾರೆ. ಟೆಲಿಮೆಡಿಸಿನ್ ಮೂಲಕವೂ ವೈದ್ಯಕೀಯ ಸಲಹೆ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಡಿ.ಎನ್.ಬಿ ಕೋರ್ಸ್‌ಗಳನ್ನು, ತಾಲ್ಲೂಕು ಆಸ್ಪತ್ರೆಗಳಲ್ಲಿ ಡಿ.ಎನ್.ಬಿ ಮತ್ತು ಡಿಪ್ಲೋಮಾ ಕೋರ್ಸ್‌ಗಳನ್ನು ಆರಂಭಿಸಿದ ಮೊದಲ ರಾಜ್ಯ ಕರ್ನಾಟಕ. 2020-21 ರಲ್ಲಿ ಕಾಯಕಲ್ಪ ಪ್ರಶಸ್ತಿಯನ್ನು 8 ಎಚ್.ಡಬ್ಲ್ಯೂ.ಸಿಗಳು ಮೊದಲ ಬಾರಿಗೆ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಎನ್.ಕ್ಯೂ.ಎ.ಎಸ್ ಪ್ರಕಾರ ಒಟ್ಟು 51 ಸಾರ್ವಜನಿಕ ಆರೋಗ್ಯ ಸೌಲಭ್ಯ ಕೇಂದ್ರಗಳನ್ನು ಪ್ರಮಾಣೀಕರಿಸಲಾಗಿದೆ ಎಂದರು.

ಮೊದಲ ಹಂತದಲ್ಲಿ 114 “ನಮ್ಮ ಕ್ಲಿನಿಕ್”ಗಳನ್ನು ಆರಂಭಿಸಿದ್ದು. 128 ಮಹಿಳಾ ಕ್ಲಿನಿಕ್‌ಗಳು ಮತ್ತು ನಗರ ಪ್ರದೇಶಗಳಲ್ಲಿ 128 ಪಾಲಿಕ್ಲಿನಿಕ್‌ಗಳು ಕಾರ್ಯಾರಂಭ ಮಾಡುವ ಹಂತದಲ್ಲಿವೆ. ಜಿಲ್ಲಾ ಆಸ್ಪತ್ರೆಗಳಲ್ಲಿ ನಾಗರಿಕ ಸಹಾಯವಾಣಿ ಆರಂಭಿಸುತ್ತಿದ್ದು, ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೂ ಇದನ್ನು ವಿಸ್ತರಿಸಲಾಗುತ್ತಿದೆ. ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ತಾಯಿ ಎದೆಹಾಲು ಬ್ಯಾಂಕ್ ಸ್ಥಾಪನೆ ಮತ್ತು ಪ್ರಾದೇಶಿಕವಾರು ಹೆಚ್ಚುವರಿಯಾಗಿ 4 ತಾಯಿ ಎದೆಹಾಲು ಬ್ಯಾಂಕ್ ಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಯಕೃತ್ತಿನ ಉರಿಯೂತದ ಉಚಿತ ರೋಗ ಪತ್ತೆ ಮತ್ತು ಚಿಕಿತ್ಸೆಗಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ಹೇಳಿದರು.
ಆರೋಗ್ಯ ನಂದನ:
ಕೋವಿಡ್ ಸಾಂಕ್ರಾಮಿಕದ ನಡುವೆ ಮಕ್ಕಳ ಪರೀಕ್ಷೆ, ಸ್ವಾಸ್ಥ್ಯ ಕಿರಣ ಆನ್‌ಲೈನ್ ವರದಿ ಮತ್ತು ಜಾಡು ಪತ್ತೆ ವ್ಯವಸ್ಥೆಯ ಅನುಷ್ಠಾನದ ಮೂಲಕ 65 ಲಕ್ಷ ಮಕ್ಕಳನ್ನು ತಪಾಸಣೆ ಮಾಡಲಾಗಿದೆ. ಗ್ರಾಮೀಣ ಮಕ್ಕಳ ಆರೋಗ್ಯ ರಕ್ಷಣೆಗೆ “ಆರೋಗ್ಯನಂದನ” ದ ಮೂಲಕ ಮಕ್ಕಳ ವೈದ್ಯರೊಂದಿಗೆ ಆರ್.ಬಿ.ಎಸ್.ಕೆ ತಂಡ ಪ್ರತಿದಿನ ಗ್ರಾಮಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡುತ್ತಿದ್ದು, 1.7 ಕೋಟಿ ಪೈಕಿ 69,21,179 ಮಕ್ಕಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದರು.

ಎಲ್ಲಾ ಜಿಲ್ಲೆಗಳು ಮತ್ತು 167 ಕೇಂದ್ರಗಳಲ್ಲಿ ಡಯಾಲಿಸಸ್ ಸೇವೆಗಳು ದೊರೆಯುತ್ತಿವೆ. ಕರ್ನಾಟಕ ಸಮಗ್ರ ಪ್ರಾಥಮಿಕ ಆರೋಗ್ಯ ಆರೈಕೆ ಯೋಜನೆಯಡಿ 75% ರಷ್ಟು – 5.9 ಕೋಟಿ ಜನ ನೋಂದಣಿಯಾಗಿದ್ದು 2.82 ಕೋಟಿ 30 ವರ್ಷ ವಯೋಮಿತಿಯವರು ಸೇರಿದ್ದಾರೆ. 1.43 ಕೋಟಿ ಜನರಿಗೆ ಸಾಂಕ್ರಾಮಿಕವಲ್ಲದ ರೋಗಗಳ ಪರೀಕ್ಷೆ ನಡೆಸಲಾಗಿದ್ದು, ಈ ವಲಯದ ನೋಂದಣಿಯಲ್ಲಿ ಮೊದಲ ಮತ್ತು ಪರೀಕ್ಷೆಯಲ್ಲಿ 2ನೇ ಸ್ಥಾನದಲ್ಲಿದೆ. ಚಿಕ್ಕಮಗಳೂರು ಜಿಲ್ಲೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಅತ್ಯುತ್ತಮ ಸಾಮರ್ಥ್ಯ ಹೊಂದಿರುವ ರಾಜ್ಯವಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

Also read: ತೀರ್ಥಹಳ್ಳಿ: ಸಹಕಾರ ಸಂಘದ ಹಣ ದುರುಪಯೋಗ ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ

ಶಾಲಾ ಕಣ್ಣು ತಪಾಸಣಾ ಕಾರ್ಯಕ್ರಮದಡಿ 35,73,295 (56.68%) ಮಕ್ಕಳ ತಪಾಸಣೆ ಮಾಡಲಾಗಿದೆ. ರಾಜ್ಯ ಎಂ.ಆರ್.ಐ ಸೇವೆಗಳನ್ನು ಪಿಪಿಪಿ ಮಾದರಿಯಡಿ 6 ಜಿಲ್ಲಾಸ್ಪತ್ರೆಗಳಲ್ಲಿ ಆರಂಭಿಸಲಾಗಿದ್ದು, 15 ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ. ಅಧಿಸೂಚಿತ ಕ್ಷಯರೋಗ ದರ ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ 5 ಬೆಳ್ಳಿ ಮತ್ತು 9 ಕಂಚು ಸೇರಿ 14 ಪದಕಗಳನ್ನು ಪಡೆದಿದೆ. ಕೃತಕ ಬುದ್ದಿಮತ್ತೆ ತಂತ್ರಜ್ಞಾನದಡಿ ಐದು ಜಿಲ್ಲೆಗಳಲ್ಲಿ ದೂರದ ರೇಡಿಯೋ ವಿಕಿರಣ ಕೇಂದ್ರಗಳ ಮೂಲಕ ಕ್ಷಯರೋಗ ಪತ್ತೆ ಮಾಡುವ ವ್ಯವಸ್ಥೆಯನ್ನು ಮೊದಲ ಬಾರಿಗೆ ಆರಂಭಿಸಲಾಗಿದೆ ಎಂದು ತಿಳಿಸಿದರು.
ಆಂಬ್ಯುಲೆನ್ಸ್‌ ಸೇವೆಯಲ್ಲಿ ಸುಧಾರಣೆ
ವಿಶ್ವದರ್ಜೆಯ ಆಧುನಿಕ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಮತ್ತು 104 ಆರೋಗ್ಯ ಸಹಾಯವಾಣಿ ಆರೋಗ್ಯ ಹೆಲ್ಪ್ ಲೈನ್ ಸೇವೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ 42 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆಗಾಗಿ 5,426 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜ್ಯೋತಿ ಸಂಜೀವಿನಿ ಯೋಜನೆ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ, ಅಂಗಾಂಗ ಕಸಿ ಯೋಜನೆ, ಕಿವುಡ ಸಾಧನ ಅಳವಡಿಕೆ ಯೋಜನೆ ಉತ್ತಮವಾಗಿ ಅನುಷ್ಠಾನಗೊಂಡಿವೆ ಎಂದರು.

ಆಯುಷ್ಮಾನ್‌ ಕಾರ್ಡ್‌ ವಿತರಣೆ
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ – ಆರೋಗ್ಯ ಕರ್ನಾಟಕದಡಿ ಕೋ ಬ್ರಾಂಡೆಡ್ ಉಚಿತ ಪಿವಿಸಿ ಗುರುತಿನ ಚೀಟಿಗಳನ್ನು ತ್ವರಿತವಾಗಿ ವಿತರಿಸುತ್ತಿದ್ದು, 1.22 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ವಿಶೇಷ ವಲಯದ 746 ಹಿರಿಯ ವೈದ್ಯಕೀಯ ಅಧಿಕಾರಿಗಳು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು – 1048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು 88- ದಂತ ಆರೋಗ್ಯಾಧಿಕಾರಿಗಳು ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಗುಂಪಿನಲ್ಲಿ 320 ಅರೆ ವೈದ್ಯಕೀಯ ಹುದ್ದೆಗಳು ಮತ್ತು 558 ಉಳಿದ ಮೂಲ ಗುಂಪಿನ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಕರೆದಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಾನಸಿಕ ಆರೋಗ್ಯಕ್ಕೂ ಒತ್ತು
ನಿಮ್ಹಾನ್ಸ್ ನೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮದಡಿ ನರ ವೈಜ್ಞಾನಿಕ ಕಾಯಿಲೆಗಳ ಆರೈಕೆ, ತೃತೀಯ ಮಟ್ಟದಲ್ಲಿ ನಿಮ್ಹಾನ್ಸ್, ದ್ವಿತೀಯ ಹಂತದಲ್ಲಿ ಜಿಲ್ಲಾಸ್ಪತ್ರೆಗಳು ಮತ್ತು ಪಿ.ಎಚ್.ಸಿಗಳಲ್ಲಿ ಮೆದುಳು ಆರೋಗ್ಯ ಕ್ಲಿನಿಕಲ್ ಗಳನ್ನು ಸ್ಥಾಪಿಸಲಾಗಿದೆ. ಹೆಚ್ಚು ಒತ್ತಡವಿರುವ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 30 ಹಾಸಿಗೆಗಳ ಸಮುದಾಯ ಆಧಾರಿತ ಆರೋಗ್ಯ ಕೇಂದ್ರಗಳನ್ನು 1,000 ಕೋಟಿ ರೂ. ವೆಚ್ಚದಲ್ಲಿ ಎರಡು ವರ್ಷಗಳಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ದೊರೆತಿದೆ. ಜೊತೆಗೆ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ 44832 ಲಕ್ಷ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 47 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸುತ್ತಿದ್ದು, ವೆರಿಫೈಡ್ ಹೆಲ್ತ್ ಕೇರ್ ಫ್ರೊಫೆಷನಲ್ಸ್ ರಿಜಿಸ್ಟ್ರೀಯಲ್ಲಿ ಎಚ್.ಪಿ.ಆರ್ ಗುರುತಿನ ಚೀಟಿ ಮತ್ತು ಸೌಲಭ್ಯ ಒದಗಿಸುವಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯ ಆರೋಗ್ಯ ಮಂಥನದಡಿ ಆಯುಷ್ಮಾನ್ ಉತ್ಕೃಷ್ಟತಾ ಪುರಸ್ಕಾರ ದೊರೆತಿದ್ದು, ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ವಲಯದಲ್ಲಿ 30 ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಹೊಂದಿರುವ ಏಕೈಕ ದೊಡ್ಡ ರಾಜ್ಯವಾಗಿದೆ. ಕಾರವಾದ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಬೋಧನಾ ಆಸ್ಪತ್ರೆಯು ದೇಶದ ಉನ್ನತ ವೈದ್ಯಕೀಯ ಕಾಲೇಜು ಬೋಧನಾ ಆಸ್ಪತ್ರೆಯಾಗಿ ರೂಪುಗೊಂಡಿದೆ. ಎಸ್.ಎ.ಎಸ್.ಟಿ ಅಡಿ ಪ್ರಸ್ತುತ 22 ಆಸ್ಪತ್ರೆಗಳು ನೋಂದಣಿಯಾಗಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಸಚಿವ ಡಾ. ಕೆ ಸುಧಾಕರ್
Previous Post

ತೀರ್ಥಹಳ್ಳಿ: ಸಹಕಾರ ಸಂಘದ ಹಣ ದುರುಪಯೋಗ ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ

Next Post

ಜ.13ರವರೆಗೆ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ರಥಯಾತ್ರೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜ.13ರವರೆಗೆ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ರಥಯಾತ್ರೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

August 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!