No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

kalpa News by kalpa News
January 22, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೋವಿಡ್ ಪರೀಕ್ಷೆ ವ್ಯವಸ್ಥೆಯನ್ನು ಆರಂಭದಿಂದಲೂ ಸಮರ್ಥವಾಗಿ ಅನುಷ್ಠಾನ ಮಾಡಿದ್ದ ಕರ್ನಾಟಕ, ಇಂದಿಗೆ 6 ಕೋಟಿ ಪರೀಕ್ಷೆಯ ಮೈಲುಗಲ್ಲು ತಲುಪಿದೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಇದು ದೊಡ್ಡ ಯಶಸ್ಸು.

ಕೋವಿಡ್ ಆರಂಭವಾದಾಗ ರಾಜ್ಯದಲ್ಲಿ ಎನ್‍ಐವಿ ಘಟಕದಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಆಗ ಖಚಿತತೆಗಾಗಿ ಪುಣೆಯ ಎನ್‍ಐವಿ ಘಟಕಕ್ಕೆ ಮಾದರಿಗಳನ್ನು ಕಳುಹಿಸಲಾಗುತ್ತಿತ್ತು. ನಂತರ ಹಂತಹಂತವಾಗಿ ಹೊಸ ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳನ್ನು ಆರಂಭಿಸಲಾಯಿತು. ಸದ್ಯ ರಾಜ್ಯದಲ್ಲಿ, 99 ಸರ್ಕಾರಿ ಹಾಗೂ 169 ಖಾಸಗಿ ಸೇರಿ ಒಟ್ಟು 268 ಲ್ಯಾಬ್ ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಈವರೆಗೆ 1,14,12,162 ರಾಪಿಡ್ ಆಂಟಿಜೆನ್, 4,87,02,653 ಆರ್ ಟಿಪಿಸಿಆರ್ ಹಾಗೂ ಇತರೆ ವಿಧಾನಗಳು ಸೇರಿ ಒಟ್ಟು 6,01,14,815 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. 2020 ರಲ್ಲಿ ಒಟ್ಟು 1,41,96,065, 2021 ರಲ್ಲಿ 4,23,91,357 ಹಾಗೂ 2022 ರಲ್ಲಿ ಈವರೆಗೆ 35,27,393 ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, “ಕೋವಿಡ್ ಸಾಂಕ್ರಾಮಿಕವನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಉತ್ತಮ ಪರೀಕ್ಷಾ ವ್ಯವಸ್ಥೆ ಕೂಡ ಕಾರಣ. ಆರಂಭದಿಂದಲೂ ಕರ್ನಾಟಕ ಪರೀಕ್ಷಾ ವ್ಯವಸ್ಥೆಯಲ್ಲಿ ಮುಂದಿದ್ದು, ಉತ್ತಮ ಪರೀಕ್ಷೆ ಹಾಗೂ ಟ್ರ್ಯಾಕಿಂಗ್ ವಿಧಾನ ಅಳವಡಿಸಿಕೊಂಡಿದೆ. ಈಗ 6 ಕೋಟಿ ಪರೀಕ್ಷೆಗಳ ಮೂಲಕ ಕೋವಿಡ್ ಹೋರಾಟದಲ್ಲಿ ಮುಂಚೂಣಿಯಲ್ಲಿದೆ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ. ಹೆಚ್ಚು ಕೋವಿಡ್ ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ರಾಜ್ಯವು ಇಡೀ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲಾ ಜಿಲ್ಲಾಡಳಿತ ಹಾಗೂ ಆರೋಗ್ಯ ಸಿಬ್ಬಂದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಸಾಮರ್ಥ್ಯ ಹೆಚ್ಚಳ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಆರಂಭದಿಂದಲೇ 5 ಟಿ ವಿಧಾನ (ಟೆಸ್ಟ್, ಟ್ರ್ಯಾಕ್, ಟ್ರೇಸಿಂಗ್, ಟ್ರಯಾಜಿಂಗ್, ಟೆಕ್ನಾಲಜಿ) ಅನುಸರಿಸಿದ್ದವು. 20, 000 ಜನಸಂಖ್ಯೆಗೆ ಅನುಗುಣವಾಗಿ, ಒಟ್ಟು 3,678 (ಸರ್ಕಾರಿ 3,102, ಖಾಸಗಿ 666) ಮಾದರಿ ಸಂಗ್ರಹ ಕೇಂದ್ರಗಳನ್ನು ಆರಂಭಿಸಲಾಯಿತು. ಜೊತೆಗೆ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜು, ಖಾಸಗಿ ಆಸ್ಪತ್ರೆ, ಲ್ಯಾಬ್ ಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭಿಸಲಾಯಿತು. ಒಟ್ಟು 63 ವೈದ್ಯಕೀಯ ಕಾಲೇಜುಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭವಾದವು. ಆರಂಭದಲ್ಲಿ 10-12 ಸರ್ಕಾರಿ ಪ್ರಯೋಗಾಲಯಗಳಲ್ಲಿ ಮಾತ್ರ ಆರ್ ಟಿಪಿಸಿಆರ್ ಪರೀಕ್ಷಾ ವ್ಯವಸ್ಥೆ ಇದ್ದು, ಈಗ ಆ ಸಂಖ್ಯೆ 57ಕ್ಕೇರಿದೆ. 108 ಆರ್ ಎನ್‍ಎ ಎಕ್ಸ್ ಟ್ರ್ಯಾಕ್ಟರ್, 139 ಆರ್ ಟಿಪಿಸಿಆರ್ ಯಂತ್ರ ಹಾಗೂ ಒಂದು ಪೂರ್ಣ ಪ್ರಮಾಣದ ಯಂತ್ರದ ಮೂಲಕ ದಿನದ ಪರೀಕ್ಷಾ ಸಾಮರ್ಥ್ಯವನ್ನು 1,20,800 ಕ್ಕೆ ಏರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ವೈರಾಣು ಪ್ರಕರಣ ಪತ್ತೆಯಾದ ಬಳಿಕ, ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಲ್ಲಿ ಶೇ.2 ರಷ್ಟು ಪರೀಕ್ಷೆಗೊಳಪಡಿಸುವ ಕ್ರಮ ಜಾರಿ ಮಾಡಲಾಯಿತು. ನಂತರ ಡಿಸೆಂಬರ್ ನಿಂದ ಪರೀಕ್ಷಾ ಗುರಿಯನ್ನು 80,000 ದಿಂದ 1 ಲಕ್ಷಕ್ಕೆ ಹೆಚ್ಚಿಸಲಾಯಿತು ಎಂದು ಸಚಿವರು ವಿವರಿಸಿದ್ದಾರೆ.

ಮಕ್ಕಳ ಪರೀಕ್ಷೆ:
ಕೋವಿಡ್ 3 ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಅಭಿಪ್ರಾಯದ ಹಿನ್ನೆಲೆಯಲ್ಲಿ, ಒಟ್ಟು ಪರೀಕ್ಷೆಯಲ್ಲಿ ಕಡ್ಡಾಯವಾಗಿ ಶೇ.2 ರಷ್ಟು ಪರೀಕ್ಷೆಯನ್ನು ಮಕ್ಕಳಿಗೆ ನಡೆಸುವ ಕ್ರಮ ತರಲಾಗಿದೆ. ಡಿಸೆಂಬರ್ 1-ಜನವರಿ 20 ರ ಅವಧಿಯಲ್ಲಿ ನಡೆಸಲಾದ ಒಟ್ಟು ಪರೀಕ್ಷೆಯಲ್ಲಿ, 29% ರಷ್ಟು ಮಕ್ಕಳಿಗೆ ಮಾಡಿದ ಪರೀಕ್ಷೆಗಳಾಗಿವೆ. ಜೊತೆಗೆ, 15 ದಿನಕ್ಕೊಮ್ಮೆ ಕಾಲೇಜು, ಪ್ರೌಢಶಾಲೆ, ಹೋಟೆಲ್, ರೆಸ್ಟೋರೆಂಟ್, ಅಡುಗೆ ಸಿಬ್ಬಂದಿ ಮೊದಲಾದವರಿಗೆ ರಾಂಡಮ್ ಪರೀಕ್ಷೆ ಮಾಡಲಾಗುತ್ತಿದೆ.

ಇತರೆ ಅಂಶಗಳು:

  • ಕೋವಿಡ್ ಮೂರನೇ ಅಲೆ ನಿರ್ವಹಣೆಗಾಗಿ ಜನವರಿ 18 ರಿಂದ ದಿನದ ಪರೀಕ್ಷಾ ಗುರಿ 2 ಲಕ್ಷಕ್ಕೆ ನಿಗದಿ.
  • ಪ್ರಾಥಮಿಕ ಸಂಪರ್ಕ ಹಾಗೂ ರೋಗಲಕ್ಷಣ ಇರುವವರಿಗೆ ಪರೀಕ್ಷೆಗೆ ಒತ್ತು. RAT ಪರೀಕ್ಷೆಯಲ್ಲಿ ನೆಗಟಿವ್ ವರದಿ ಬಂದರೂ, ರೋಗ ಲಕ್ಷಣವಿದ್ದರೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡುವುದು.
  • ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಿಂದ ಮನೆಮನೆ ಭೇಟಿ ನೀಡಿ ಪರೀಕ್ಷೆ. ಸಂಚಾರಿ ತಂಡಗಳನ್ನು ಬಳಸಿಕೊಂಡು ಮಾನಸಿಕ ಅಸ್ವಸ್ಥರು, ಅಂಗವಿಕಲರ ಮನೆಗೆ ಭೇಟಿ ನೀಡಿ ಪರೀಕ್ಷೆ.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidKannada NewsKannada News LiveKannada News OnlineKannada News WebsiteKannada WebsiteLatest News KannadaMinister Dr SudhakarNews in KannadaNews KannadaState Newsಕೋವಿಡ್ಬೆಂಗಳೂರುಸಚಿವ ಡಾ.ಸುಧಾಕರ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರದ ವಿವಿಧ ವಾರ್ಡ್‌ಗಳಲ್ಲಿ ಶಾಸಕ ಹಾಲಪ್ಪ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ…

Next Post

ಅಂತರರಾಜ್ಯ ಜಲ ವಿವಾದ ಕುರಿತು ಸ್ಪಷ್ಟ ನಿಲುವು ತಳೆಯಲು ವರ್ಚುಯಲ್ ಸಮ್ಮೇಳನ ಸಹಕಾರಿ: ಸಿಎಂ

kalpa News

kalpa News

Next Post
ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಅಂತರರಾಜ್ಯ ಜಲ ವಿವಾದ ಕುರಿತು ಸ್ಪಷ್ಟ ನಿಲುವು ತಳೆಯಲು ವರ್ಚುಯಲ್ ಸಮ್ಮೇಳನ ಸಹಕಾರಿ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL