ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ʼಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-2027ʼ, ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Minister Sudhakar ಹೇಳಿದರು.
ಬೆಂಗಳೂರಿನಲ್ಲಿ ಆರ್ಮಿ ಡಿಸೈನ್ ಬ್ಯೂರೋದ ರೀಜಿನಲ್ ಟೆಕ್ನಾಲಜಿ ನೋಡ್ (ಆರ್‌ಟಿಎನ್) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

ದೇಶದ ಶೇ.25 ರಷ್ಟು ವಿಮಾನ ಹಾಗೂ ಅಂತರಿಕ್ಷ ನೌಕೆಯ ತಯಾರಿಕಾ ಉದ್ಯಮಗಳು ಕರ್ನಾಟಕದಲ್ಲೇ ಇದ್ದು, ಈ ಕ್ಷೇತ್ರದಲ್ಲಿ ರಾಜ್ಯ ಪ್ರಾಬಲ್ಯ ಹೊಂದಿದೆ. ರಕ್ಷಣಾ ಕ್ಷೇತ್ರಕ್ಕೆ ಪೂರೈಕೆಯಾಗುವ ಹೆಲಿಕಾಪ್ಟರ್, ವಿಮಾನಗಳಲ್ಲಿ ಶೇ.67 ರಷ್ಟು ರಾಜ್ಯದಲ್ಲೇ ತಯಾರಾಗುತ್ತಿವೆ. ರಾಜ್ಯ ಸರ್ಕಾರ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿಯನ್ನು ಜಾರಿ ಮಾಡಲಿದ್ದು, ಇದು ಹೊಸ ತಂತ್ರಜ್ಞಾನಗಳೊಂದಿಗೆ ಸ್ವದೇಶಿ ಉತ್ಪನ್ನಗಳ ತಯಾರಿಕೆಗೆ ಸಂಪೂರ್ಣ ಉತ್ತೇಜನ ನೀಡಲಿದೆ ಎಂದರು.

ಕೋವಿಡ್ ಸಾಂಕ್ರಾಮಿಕದ ನಂತರ ಆರ್ಥಿಕತೆಯ ಪ್ರಗತಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, 9.5 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳು ನಡೆದಿವೆ. ಹೂಡಿಕೆಯ ವಿಚಾರದಲ್ಲಿ ಈ ಮಟ್ಟಿಗೆ ಉದ್ಯಮಿಗಳ ವಿಶ್ವಾಸವನ್ನು ರಾಜ್ಯ ಗಳಿಸಿದೆ ಎಂದರು.

Also read: ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸಹಕಾರ ನೀಡಿ: ನಿರ್ದೇಶಕ ಎಸ್. ನಾರಾಯಣ್ ಕರೆ
ಸೇನೆಗೆ ಧನ್ಯವಾದ ಅರ್ಪಿಸಿದ ಸಚಿವರು
ಕನ್ನಡಿಗರೇ ಆದ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ಹಾಗೂ ಲೆಫ್ಟಿನೆಂಟ್ ಕರ್ನಲ್ ಬಿ.ಕೆ.ರೆಪ್ಸ್‌ವಾಲ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆರ್‌ಟಿಎನ್ ಆರಂಭವಾಗಿದೆ. ಬೆಂಗಳೂರು ತಂತ್ರಜ್ಞಾನದ ರಾಜಧಾನಿ, ನವೋದ್ಯಮಗಳ ಕೇಂದ್ರವಾಗಿದ್ದು, ಇಲ್ಲಿ ಆರ್‌ಟಿಎನ್‌ಗೆ ಪೂರಕ ವಾತಾವರಣವಿದೆ. ಈ ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆ ಸಾಕಾರವಾಗಲಿದೆ. ಸೇನೆಗೆ ಬೇಕಾದ ಎಲ್ಲಾ ತಂತ್ರಜ್ಞಾನ, ಉಪಕರಣಗಳನ್ನು ಭಾರತೀಯರೇ, ಭಾರತದಲ್ಲೇ ಅದರಲ್ಲೂ ಬೆಂಗಳೂರಿನಲ್ಲಿ ತಯಾರಿಸುವ ಕೆಲಸವನ್ನು ಸೇನೆ ಮಾಡುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ತುಂಬು ಹೃದಯದ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post