No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ ತಂದ ಮೊದಲ ರಾಜ್ಯ ಕರ್ನಾಟಕ: ಸಚಿವ ಸುಧಾಕರ್‌

ಆರ್ಮಿ ಡಿಸೈನ್‌ ಬ್ಯೂರೋದ ರೀಜಿನಲ್‌ ಟೆಕ್ನಾಲಜಿ ನೋಡ್‌ (ಆರ್‌ಟಿಎನ್‌) ಉದ್ಘಾಟನಾ ಸಮಾರಂಭ

kalpa News by kalpa News
November 14, 2022
in ಬೆಂಗಳೂರು ನಗರ
0
ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ ತಂದ ಮೊದಲ ರಾಜ್ಯ ಕರ್ನಾಟಕ: ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ, ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ಹೇಳಿದರು.

ಬೆಂಗಳೂರಿನಲ್ಲಿ ಆರ್ಮಿ ಡಿಸೈನ್‌ ಬ್ಯೂರೋದ ರೀಜಿನಲ್‌ ಟೆಕ್ನಾಲಜಿ ನೋಡ್‌ (ಆರ್‌ಟಿಎನ್‌) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ವೈಮಾನಿಕ ಕ್ಷೇತ್ರದಲ್ಲಿ ಭಾರತ ಬಹಳ ಪ್ರಗತಿ ಸಾಧಿಸಿದೆ. ಇತ್ತೀಚೆಗೆ ಕೊಚ್ಚಿಯಲ್ಲಿ ಸ್ವದೇಶಿ ನಿರ್ಮಿತ ಐಎನ್‌ಎಸ್‌ ವಿಕ್ರಾಂತ್‌ ಮೂಲಕ ರಕ್ಷಣಾ ಕ್ಷೇತ್ರದ ಸಾಮರ್ಥ್ಯ ಹೆಚ್ಚಾಗಿದೆ. ಕರ್ನಾಟಕವು ಎಲ್ಲಾ ಕ್ಷೇತ್ರಗಳಲ್ಲಿ ಹೂಡಿಕೆದಾರರ ಆದ್ಯತೆಯ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಬಹಳ ಹಿಂದೆಯೇ ಎಚ್‌ಎಎಲ್‌ ಸಂಸ್ಥೆ ಆರಂಭವಾಗಿದ್ದರಿಂದ, ವಿಮಾನಯಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ ಸಾಧಿಸಿತು. ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ ತಂದ ಮೊದಲ ರಾಜ್ಯವೂ ಕರ್ನಾಟಕವೇ ಆಗಿದ್ದು, ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿ ಸಾಧಿಸಿದೆ ಎಂದರು.

ದೇಶದ ಶೇ.25 ರಷ್ಟು ವಿಮಾನ ಹಾಗೂ ಅಂತರಿಕ್ಷ ನೌಕೆಯ ತಯಾರಿಕಾ ಉದ್ಯಮಗಳು ಕರ್ನಾಟಕದಲ್ಲೇ ಇದ್ದು, ಈ ಕ್ಷೇತ್ರದಲ್ಲಿ ರಾಜ್ಯ ಪ್ರಾಬಲ್ಯ ಹೊಂದಿದೆ. ರಕ್ಷಣಾ ಕ್ಷೇತ್ರಕ್ಕೆ ಪೂರೈಕೆಯಾಗುವ ಹೆಲಿಕಾಪ್ಟರ್‌, ವಿಮಾನಗಳಲ್ಲಿ ಶೇ.67 ರಷ್ಟು ರಾಜ್ಯದಲ್ಲೇ ತಯಾರಾಗುತ್ತಿವೆ. ರಾಜ್ಯ ಸರ್ಕಾರ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿಯನ್ನು ಜಾರಿ ಮಾಡಲಿದ್ದು, ಇದು ಹೊಸ ತಂತ್ರಜ್ಞಾನಗಳೊಂದಿಗೆ ಸ್ವದೇಶಿ ಉತ್ಪನ್ನಗಳ ತಯಾರಿಕೆಗೆ ಸಂಪೂರ್ಣ ಉತ್ತೇಜನ ನೀಡಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಪರಿಕಲ್ಪನೆಯಡಿ ʼಮೇಕ್‌ ಇನ್‌ ಇಂಡಿಯಾʼ ಹಾಗೂ ʼಸ್ಕಿಲ್‌ ಇಂಡಿಯಾʼ ಯೋಜನೆ ನೀಡಿದ್ದಾರೆ. ಈಗ ಹೊಸ ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ ಯಿಂದ ರಾಜ್ಯದಲ್ಲಿ 4-5 ವರ್ಷಗಳಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷಿಸಬಹುದು. ಇದರಿಂದ ಹೆಚ್ಚು ಉದ್ಯೋಗ ಸೃಷ್ಟಿಯ ಜೊತೆಗೆ, ಸಂಶೋಧನೆ ಮತ್ತು ಅಭಿವೃದ್ಧಿಯ ಬಲವರ್ಧನೆಯಾಗಲಿದೆ. ಹಾಗೆಯೇ, ಈ ನೀತಿಯಿಂದ ಉದ್ಯಮ ನಡೆಸುವ ಪ್ರಕ್ರಿಯೆಗಳು (ಈಸ್‌ ಆಫ್‌ ಡೂಯಿಂಗ್‌ ಬಿಸ್‌ನೆಸ್‌) ಸರಳವಾಗಲಿದೆ ಎಂದರು.

ಕೋವಿಡ್‌ ಸಾಂಕ್ರಾಮಿಕದ ನಂತರ ಆರ್ಥಿಕತೆಯ ಪ್ರಗತಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, 9.5 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳು ನಡೆದಿವೆ. ಹೂಡಿಕೆಯ ವಿಚಾರದಲ್ಲಿ ಈ ಮಟ್ಟಿಗೆ ಉದ್ಯಮಿಗಳ ವಿಶ್ವಾಸವನ್ನು ರಾಜ್ಯ ಗಳಿಸಿದೆ ಎಂದರು.
ಭಾರತೀಯ ಸೇನೆಯ ಯಾವುದೇ ಕಾರ್ಯಕ್ರಮ, ಯೋಜನೆಗಳಿಗೆ ಕರ್ನಾಟಕ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಬೆಂಗಳೂರಿನಲ್ಲಿ ಭಾರತೀಯ ಸೇನೆಯ ರೀಜಿನಲ್‌ ಟೆಕ್ನಾಲಜಿ ನೋಡ್‌ ಸ್ಥಾಪನೆ ಮಾಡಿರುವ ಭಾರತೀಯ ಸೇನೆಯ ನಡೆ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ನವೋದ್ಯಮ, ಎಂಎಸ್‌ಎಂಇ ಮೊದಲಾದವುಗಳಿಗೆ ಹೊಸ ಅವಕಾಶಗಳನ್ನು ನೀಡಲಿದೆ. ರಾಜ್ಯ ಸರ್ಕಾರವು ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ ಜಾರಿಗೊಳಿಸುತ್ತಿರುವ ಕಾಲದಲ್ಲೇ ಆರ್‌ಟಿಎನ್‌ ಆರಂಭವಾಗುತ್ತಿದೆ. ರಕ್ಷಣಾ ವಲಯದ ಆಧುನೀಕರಣ, ರಕ್ಷಣಾ ಕ್ಷೇತ್ರದಲ್ಲಿ ಆಮದು ಇಳಿಕೆ ಹಾಗೂ ರಫ್ತು ಉತ್ತೇಜನದಲ್ಲಿ ಕರ್ನಾಟಕ ಮುಖ್ಯ ಪಾತ್ರ ವಹಿಸಲು ಈ ಕ್ರಮಗಳು ಕಾರಣವಾಗಲಿದೆ. ಈ ಮೂಲಕ ಆತ್ಮನಿರ್ಭರ ಭಾರತವನ್ನು ಸಾಧಿಸಬಹುದಾಗಿದೆ ಎಂದರು.

Also read: ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸಹಕಾರ ನೀಡಿ: ನಿರ್ದೇಶಕ ಎಸ್. ನಾರಾಯಣ್ ಕರೆ

ಸೇನೆಗೆ ಧನ್ಯವಾದ ಅರ್ಪಿಸಿದ ಸಚಿವರು
ಕನ್ನಡಿಗರೇ ಆದ ಲೆಫ್ಟಿನೆಂಟ್‌ ಜನರಲ್‌ ಬಿ.ಎಸ್‌.ರಾಜು ಹಾಗೂ ಲೆಫ್ಟಿನೆಂಟ್‌ ಕರ್ನಲ್‌ ಬಿ.ಕೆ.ರೆಪ್ಸ್‌ವಾಲ್‌ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆರ್‌ಟಿಎನ್‌ ಆರಂಭವಾಗಿದೆ. ಬೆಂಗಳೂರು ತಂತ್ರಜ್ಞಾನದ ರಾಜಧಾನಿ, ನವೋದ್ಯಮಗಳ ಕೇಂದ್ರವಾಗಿದ್ದು, ಇಲ್ಲಿ ಆರ್‌ಟಿಎನ್‌ಗೆ ಪೂರಕ ವಾತಾವರಣವಿದೆ. ಈ ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆ ಸಾಕಾರವಾಗಲಿದೆ. ಸೇನೆಗೆ ಬೇಕಾದ ಎಲ್ಲಾ ತಂತ್ರಜ್ಞಾನ, ಉಪಕರಣಗಳನ್ನು ಭಾರತೀಯರೇ, ಭಾರತದಲ್ಲೇ ಅದರಲ್ಲೂ ಬೆಂಗಳೂರಿನಲ್ಲಿ ತಯಾರಿಸುವ ಕೆಲಸವನ್ನು ಸೇನೆ ಮಾಡುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ತುಂಬು ಹೃದಯದ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಸಚಿವ ಡಾ. ಕೆ ಸುಧಾಕರ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸಹಕಾರ ನೀಡಿ: ನಿರ್ದೇಶಕ ಎಸ್. ನಾರಾಯಣ್ ಕರೆ

Next Post

ನ.20ರಂದು ಆನಂದಪುರದಲ್ಲಿ ಸಾರಸ್ವಾತ ಸೌಹಾರ್ದ ಸಹಕಾರದ ನೂತನ ಶಾಖೆಗೆ ಚಾಲನೆ

kalpa News

kalpa News

Next Post
ನ.20ರಂದು ಆನಂದಪುರದಲ್ಲಿ ಸಾರಸ್ವಾತ ಸೌಹಾರ್ದ ಸಹಕಾರದ ನೂತನ ಶಾಖೆಗೆ ಚಾಲನೆ

ನ.20ರಂದು ಆನಂದಪುರದಲ್ಲಿ ಸಾರಸ್ವಾತ ಸೌಹಾರ್ದ ಸಹಕಾರದ ನೂತನ ಶಾಖೆಗೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL