No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೆಎಎಸ್‌ ಪೂರ್ವಭಾವಿ ಪರೀಕ್ಷೆ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ: ಆರ್. ಅಶೋಕ್ ಆಗ್ರಹ

kalpa News by kalpa News
January 17, 2025
in ಬೆಂಗಳೂರು ನಗರ
0
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಲೋಕಸೇವಾ ಆಯೋಗ #KPSC ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ #KAS Preliminary Exam ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.
ಕೆಪಿಎಸ್ಸಿ ಪರೀಕ್ಷೆಯಲ್ಲಾಗಿರುವ ಎಡವಟ್ಟುಗಳು, ಅದರಲ್ಲೂ ಮುಖ್ಯವಾಗಿ ಭಾಷಾಂತರದಲ್ಲಿ ಆಗಿರುವ ಲೋಪದೋಷಗಳ ದುಷ್ಪರಿಣಾಮವನ್ನು ಗ್ರಾಮೀಣ ಭಾಗದ ಯುವಕ ಯುವತಿಯರು ಎದುರಿಸಬೇಕಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕನ್ನಡ ಮಾಧ್ಯಮದಲ್ಲಿ ಶಾಲಾ, ಕಾಲೇಜು ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಗ್ರಾಮೀಣ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ. ಸರ್ಕಾರಿ ಅಧಿಕಾರಿಗಳಾಗಿ ಗ್ರಾಮೀಣ ಭಾಗದ ಜನರ ಸೇವೆ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ತಯಾರಿ ನಡೆಸಿದ ಅಭ್ಯರ್ಥಿಗಳ ಭವಿಷ್ಯ, ಕಾಂಗ್ರೆಸ್ ಸರ್ಕಾರದ ಎಡವಟ್ಟಿನಿಂದ ಕತ್ತಲೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳು ಬೇರೆ ದಾರಿ ಇಲ್ಲದೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರ ಮತ್ತೊಮ್ಮೆ ದೋಷರಹಿತವಾಗಿ ಮರುಪರೀಕ್ಷೆ ನಡೆಸಬೇಕು ಅಥವಾ ಮುಖ್ಯಪರೀಕ್ಷೆಗೆ ಹಾಲಿ ಇರುವ 1:15 ಅನುಪಾತದ ಬದಲು 1:50 ಅನುಪಾತದಲ್ಲಿ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಅಭ್ಯರ್ಥಿಗಳನ್ನು ಕರೆಸಿ ಮಾತನಾಡಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿತ್ತು. ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುತ್ತೇವೆ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಕೈ ಬಿಡುವುದಿಲ್ಲ ಎಂದು ಆಶ್ವಾಸನೆ ಕೊಟ್ಟು ಮನವೊಲಿಸಬೇಕಾಗಿತ್ತು. ಆದರೆ ಸರ್ಕಾರ ಇವ್ಯಾವುದನ್ನೂ ಮಾಡಿಲ್ಲ. ಎರಡೆರಡು ಬಾರಿ ಎಡವಟ್ಟು ಮಾಡಿದ್ದರೂ ತಪ್ಪೇ ನಡೆದಿಲ್ಲ ಎನ್ನುವ ಧೋರಣೆಯನ್ನು ಕಾಂಗ್ರೆಸ್ ಸರ್ಕಾರ ತೋರಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also read: ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್

ಹೊಣೆಗಾರಿಕೆಯ ಪ್ರಶ್ನೆ

ಒಂದು ಕಡೆ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯಾದರೆ ಮತ್ತೊಂದು ಹೊಣೆಗಾರಿಕೆಯ ಪ್ರಶ್ನೆ. ಎರಡೆರಡು ಬಾರಿ ಪರೀಕ್ಷೆ ನಡೆಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ 25 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚವಾಗಿದೆ. ಆದರೂ ಪರೀಕ್ಷೆ ದೋಷಮುಕ್ತವಾಗಿಲ್ಲವೆಂದರೆ ಇದಕ್ಕೆ ಯಾರು ಹೊಣೆ? ಇದಕ್ಕೆ ಹೊಣೆಯಾದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕಿತ್ತಲ್ಲವೇ? ಇದಕ್ಕೆ ಪ್ರಮುಖ ಕಾರಣರಾದ ಪರೀಕ್ಷಾ ನಿಯಂತ್ರಕರನ್ನು ಮುಂದುವರಿಸಲಾಗಿದೆ. ಮೊದಲ ಬಾರಿ ಎಡವಟ್ಟಾದ ನಂತರ ಅಕ್ಟೋಬರ್‌ 23 ರಂದು ಅವರಿಗಿಂತ ಹಿರಿಯರಾದ ಅಧಿಕಾರಿಯನ್ನು ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಿಸಲಾಗಿತ್ತು. ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿಲ್ಲ. ನಿನ್ನೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಸರ್ಕಾರಕ್ಕೆ ಕೆಪಿಎಸ್ಸಿ ನೇಮಕಾತಿ ಬಗ್ಗೆ ಇರುವ ಕಾಳಜಿ ಎಂದು ಆರ್‌.ಅಶೋಕ ಕಿಡಿಕಾರಿದ್ದಾರೆ.
ಒಟ್ಟು 384 ಹುದ್ದೆಗಳ ಪೈಕಿ 40 ಎಸಿ ಹುದ್ದೆ ಇದೆ. ಇದು ಇದುವರೆಗಿನ ಅತಿ ಹೆಚ್ಚು ಎಂಬ ದಾಖಲೆಯಿದೆ. ಆಡಳಿತದ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಪ್ರಕ್ರಿಯೆಯಲ್ಲಿ ಇರಬೇಕಾದ ಗಂಭೀರತೆಯಾಗಲೀ, ಜವಾಬ್ದಾರಿಯಾಗಲೀ, ಈ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿಲ್ಲ. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯ ಒಟ್ಟಾರೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ನ್ಯಾಯ ಸಮ್ಮತವಾಗಿರಬೇಕು ಮತ್ತು ಅರ್ಹರಿಗೆ ಮಾತ್ರ ಅವಕಾಶ ಸಿಗುವಂತಿರಬೇಕು ಎನ್ನುವುದು ನಮ್ಮ ಆಗ್ರಹ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteKAS Preliminary ExamKPSCLatest News KannadaNews_in_KannadaNews_KannadaR Ashokಆರ್. ಅಶೋಕಕರ್ನಾಟಕ ಲೋಕಸೇವಾ ಆಯೋಗಕೆಎಎಸ್‌ ಪೂರ್ವಭಾವಿ ಪರೀಕ್ಷೆಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್

Next Post

ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಕರ್ನಾಟಕ ಜಂಗಲ್ ರಾಜ್ಯವಾಗಿದೆ | ಬಸವರಾಜ ಬೊಮ್ಮಾಯಿ ಆರೋಪ

kalpa News

kalpa News

Next Post
ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಕರ್ನಾಟಕ ಜಂಗಲ್ ರಾಜ್ಯವಾಗಿದೆ | ಬಸವರಾಜ ಬೊಮ್ಮಾಯಿ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL