ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜಧಾನಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಸದಾಕಾಲ ಸ್ಮರಣೀಯರು ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ Minister K Gopalaiah ಬಣ್ಣಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರದಲ್ಲಿರುವ ತಮ್ಮ ಕಚೇರಿಯಲ್ಲಿಂದು ನಾಡಪ್ರಭು ಕೆಂಪೇಗೌಡರ ಜಯಂತಿಗೆ Kempegowda Jayanthi ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ನೀಡಿದ ಕೊಡುಗೆಯನ್ನು ಈ ರಾಜ್ಯದ ಯಾವೊಬ್ಬ ಪ್ರಜೆಯೂ ಮರೆಯುವಂತಿಲ್ಲ. ಅಂದಿನ ಅವರ ಶ್ರಮ ಇಂದು ಹೆಮ್ಮರವಾಗಿ ಬೆಳೆದು ಬೆಂಗಳೂರು ವಿಶ್ವ ಭೂಪಟದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ ಎಂದರು.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕೆಂಪೇಗೌಡರ ಪುತ್ಥಳಿ ನಿರ್ಮಾಣವಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ ನಲ್ಲಿ ಪುತ್ಥಳಿಯನ್ನು ಉದ್ಘಾಟಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
Also read: ಮಹಿಳಾ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ಅಭಿನಂದನೀಯ: ವೆಂಕಟನಾರಾಯಣ ಅಭಿಪ್ರಾಯ
ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದಲ್ಲಿ ಪಾರ್ಕ್ ಗಳ ಅಭಿವೃದ್ಧಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹತ್ತಾರು ಪಾರ್ಕ್ ಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಇನ್ನು ಉಳಿದ ಪಾರ್ಕ್ ಗಳ ಅಭಿವೃದ್ಧಿಯ ಕುರಿತು ಸ್ಥಳೀಯರು ನಮ್ಮ ನಮನಕ್ಕೆ ತಂದರೆ ಶೀಘ್ರವೇ ಅವುಗಳನ್ನು ಆಧುನಿಕ ಶೈಲಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ಎಸ್.ಹರೀಶ್, ರೈಲ್ವೆ ನಾರಾಯಣ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ವೆಂಕಟೇಶ್ ,ಇತರರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post