ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಖಾದಿ ನೇಕಾರರಿಗೆ ಕಳೆದ ಎರಡು ವರ್ಷಗಳಿಂದ ನೀಡಬೇಕಿದ್ದ 24.26 ಕೋಟಿ ರೂಪಾಯಿ ಬಾಕಿ ಹಣವನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಉಣ್ಣೆ ಮತ್ತು ಅರಳೆ ಖಾದಿ ಕೈಮಗ್ಗ ನೇಕಾರರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಪ್ರೋತ್ಸಾಹ ಮಂಜೂರು ನೀಡುತ್ತದೆ. ಆದರೆ ,ಕೊವಿಡ್ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಆ ಹಣ ಹಂಚಿಕೆಯಾಗದೆ ಬಾಕಿ ಉಳಿದುಕೊಂಡಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಉಣ್ಣೆ ಮತ್ತು ಅರಳೆ ಖಾದಿ ಕೈಮಗ್ಗ ನೇಕಾರರ ಸಹಕಾರ ಸಂಘ ಪ್ರೋತ್ಸಾಹ ಮಜೂರಿಯನ್ನು ಬಿಡುಗಡೆ ಮಾಡಿ ನೆರವಾಗುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಅವರಿಗೆ ಮನವಿ ಸಲ್ಲಿಸಿತ್ತು. ಅದಕ್ಕೆ ಸಂದಿಸಿದ ಸಚಿವರು ಮುಖ್ಯಮಂತ್ರಿಗಳ ಗಮನ ಸೆಳೆದು ಬಾಕಿ ಹಣ ಬಿಡುಗಡೆ ಮಾಡುವಂತೆ ವಿನಂತಿಸಿದ್ದರು.

ಸಚಿವ ಎಂಟಿಬಿ ನಾಗರಾಜು ಕೃತಜ್ಞತೆ:
ಖಾದಿ ನೇಕಾರರ ಸಂಕಷ್ಟಕ್ಕೆ ಸ್ಪಂದಿಸಿ ಎರಡು ವರ್ಷಗಳ ಬಾಕಿ ಪ್ರೋತ್ಸಾಹ ಮಜೂರಿ ಧನ 24.26 ಕೋಟಿ ರೂಪಾಯಿ ಬಿಡುಗಡೆಯ ಆದೇಶ ಹೊರಡಿಸಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಎಂಟಿಬಿ ನಾಗರಾಜು ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















