ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಪ್ರಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ಸೇ ಸೀಸನ್ #Bigg Boss Kannada-12 ಆರಂಭಕ್ಕೆ ಕೆಲವೇ ತಿಂಗಳು ಬಾಕಿದ್ದು, ಹಿಂದಿನಂತೆಯೇ ಕಾರ್ಯಕ್ರಮವನ್ನು ಕಿಚ್ಚ ಸುದೀಪ್ ನಡೆಸಿಕೊಡಲಿದ್ದಾರೆ.
ಈ ಕುರಿತಂತೆ ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ಈ ಸೀಸನ್ ಶೋವನ್ನು ಸುದೀಪ್ #Sudeep ನಡೆಸಿಕೊಡುವುದಿಲ್ಲ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದೆ.
ಬಿಗ್ ಬಾಸ್ ಸಂಯೋಜಕರು ಹಾಗೂ ಕಲರ್ಸ್ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.
ಈ ಬಾರಿ ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ನಿರೂಪಣೆಯನ್ನು ಊಹೆ ಮಾಡಿಕೊಳ್ಳುವುದಕ್ಕೂ ಆಗುವುದಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಹೀಗಾಗಿ ಸುದೀಪ್ ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮವನ್ನು ಮುಂದುವರೆಸಲಿದ್ದಾರೆ.
11ನೇ ಸೀಸನ್ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅನ್ನೋ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಶುಭ ಸುದ್ದಿ ಕೊಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post