ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪುನೀತ್ ನಗುವಿನ ಒಡೆಯ ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್ ರಾಜ್ ಕುಮಾರ್, ಅವರು ಎಲ್ಲಕ್ಕೂ ಮಿಗಿಲಾಗಿ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು ಎಂದು ಜ್ಯೂನಿಯರ್ ಎನ್‌ಟಿಆರ್ Ju. NTR ಅಭಿಪ್ರಾಯಪಟ್ಟರು.
ವಿಧಾನಸಭೆ ಆವರಣದಲ್ಲಿ ನಡೆದ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿದ ಅವರು, ಒಬ್ಬ ವ್ಯಕ್ತಿಗೆ ಉಪನಾಮ ಎಂಬುದು ಪರಂಪರೆಯಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಸ್ವಂತ ಸಂಪಾದನೆಯಾಗಿರುತ್ತದೆ. ಅವರ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ಪಡೆದಿದ್ದರು, ಕರ್ನಾಟಕ ರತ್ನದ ಅರ್ಥವೇ ಪುನೀತ್ ರಾಜ್ ಕುಮಾರ್ Puneeth Rajkumar ಅವರಾಗಿದ್ದಾರೆ ಎಂದರು.
Also read: ಪುನೀತ್ ವ್ಯಕ್ತಿತ್ವ ಶ್ರೇಷ್ಟವಾದದ್ದು: ಸೂಪರ್‌ಸ್ಟಾರ್ ರಜನಿಕಾಂತ್
ಈ ಕಾರ್ಯಕ್ರಮದಲ್ಲಿ ಹೆಮ್ಮೆಯ ಗೆಳೆಯನಾಗಿ ನಿಂತಿದ್ದೇನೆ, ಈ ಅವಕಾಶ ನೀಡಿದ್ದಕ್ಕೆ ಸರ್ಕಾರಕ್ಕೆ, ಡಾ. ರಾಜ್ ಕುಟುಂಬಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post