ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ #KPSC ನೇಮಕಾತಿ ಆಯ್ಕೆ ಪಟ್ಟಿ ನಾಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿ ಕೆಪಿಎಸ್‌ಸಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಖಚಿತಪಡಿಸಿದ್ದು, ಕೆಪಿಎಸ್‌ಸಿಯ ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ಕಡತ ಪತ್ತೆಯಾದಲ್ಲಿ ಶಾಖೆ-2 ಕ್ಕೆ ಹಿಂದಿರುಗಿಸುವಂತೆಯೂ ಕೆಪಿಎಸ್‌ಸಿ ಜ್ಞಾಪನ ಪತ್ರ ಹೊರಡಿಸಿತ್ತು. ಸತತ ಒಂದು ತಿಂಗಳು ಶೋಧ ನಡೆಸಿದರೂ ಕಡತ ಪತ್ತೆಯಾಗಿರಲಿಲ್ಲ. ನಂತರ ಕಡತ ನಾಪತ್ತೆ ಕುರಿತು ದೂರು ದಾಖಲಿಸಲು ಆಯೋಗದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆಯೋಗದ ಸಹಾಯಕ ಕಾರ್ಯದರ್ಶಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯಾರ ಮೇಲೂ ಕೆಪಿಎಸ್‌ಸಿ ಅನುಮಾನ ವ್ಯಕ್ತಪಡಿಸಿಲ್ಲ. ಆದರೂ ಎಲ್ಲ ಮಾಹಿತಿ ಒದಗಿಸುವಂತೆ ಕೇಳಿದ್ದೇವೆ ಎಂದು ಅವರು ಹೇಳಿದ್ದಾರೆ.
Also read: It’s not my pride, it’s the natural self-esteem of a Kannadiga: CM Siddaramaiah

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post