ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸದ ಕರ್ನಾಟಕ ಲೋಕಸೇವಾ ಆಯೋಗ #KPSC ತನ್ನ ಅಸಹಾಯಕತೆಯನ್ನು ಒಪ್ಪಿಕೊಳ್ಳಲಿ- ಡಾ.ಪುರುಷೋತ್ತಮ ಬಿಳಿಮಲೆ
ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆಗಳಲ್ಲಿನ ಎಡವಟ್ಟುಗಳನ್ನು ಮುಂದುವರೆಸಿರುವ ಕರ್ನಾಟಕ ಲೋಕಸೇವಾ ಆಯೋಗದ ನಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ.

Also read: ಸಾಂಚಿ ವಿವಿ ಕುಲಾಧಿಪತಿಯಾಗಿ ಕರ್ನಾಟಕದ ಪ್ರೊ. ಯಜ್ಞೇಶ್ವರ ಶಾಸ್ತ್ರಿ ನೇಮಕ
ಪ್ರಶ್ನೆ ಪತ್ರಿಕೆಯ ಪ್ರಶ್ನೆಯೊಂದನ್ನು ಸಹ ಉಲ್ಲೇಖಿಸಿರುವ ಡಾ.ಬಿಳಿಮಲೆ, “ಭಾರತದಲ್ಲಿನ ಪುನರಂ ಅವರ ಲೋಕನ ವಿಮರ್ಶಿ ಅಧಿಕಾರವು ಉಚ್ಚ ನ್ಯಾಯಾಲಯ ದೋಂದಿಗೆ ಸರ್ವೋಚ್ಚ ನ್ಯಾಯಾಲಯವು ಹೊಂದಿದೆ” ಎನ್ನುವ ಅರ್ಥವಿಲ್ಲದ ವಾಕ್ಯವೂ ಸಹ ಪ್ರಶ್ನೆಯಾಗಿರುವುದು ಆಯೋಗದ ಗಂಭೀರಲೋಪದ ವಿಷಯವಾಗಿರುತ್ತದೆ. ಕಳೆದ ಬಾರಿ ಪ್ರಾಧಿಕಾರದ ಸೂಚನೆಯ ಮೇರೆಗೆ ಆಯೋಗದಲ್ಲಿ ಭಾಷಾಂತರ ವಿಭಾಗವನ್ನು ಆರಂಭಿಸುವುದಾಗಿ ಭರವಸೆಯನ್ನು ನೀಡಿದರೂ ಸಹ ಇಲ್ಲಿಯವರೆಗೂ ಕ್ರಮಕ್ಕೆ ಮುಂದಾಗದಿರುವುದು ಆಯೋಗದ ಅಸಹಾಯಕತೆಯನ್ನು ಅಭಿವ್ಯಕ್ತಿಸುತ್ತದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






Discussion about this post