ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನವೆಂಬರ್ 24, 2024ರಂದು ನಡೆಸಲು ಉದ್ದೇಶಿಸಿರುವ ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆಯ ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡುತ್ತಿರುವ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತಂತೆ ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿರುವ ಡಾ.ಬಿಳಿಮಲೆ, ಪರೀಕ್ಷಾ ಪ್ರಾಧಿಕಾರದ ನಿರ್ಣಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಷ್ಟೇ ಅಲ್ಲ, ಈ ನೆಲದ ಕಾನೂನನ್ನು ಉಲ್ಲಂಘಿಸುವ ವಿಷಯವಾಗಿರುತ್ತದೆ. ಈ ಕುರಿತಂತೆ ಅದು ಕೂಡಲೇ ಕ್ರಮವಹಿಸಿ ಕನ್ನಡ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಒದಗಿಸುವುದು ಮತ್ತು ಈ ಅಚಾತುರ್ಯಕ್ಕೆ ಕಾರಣವೇನು ಎಂಬ ಕುರಿತು ವರದಿ ಸಲ್ಲಿಸುವುದು ಎಂದು ಸೂಚಿಸಿದ್ದಾರೆ.
Also read: ಶ್ರೀ ವಿಜಯದಾಸರ ಆರಾಧನೆ | ನ.14ರಂದು ಹರಿನಾಮ ಸಂಕೀರ್ತನೆ, ದಾಸವಾಣಿ ಕಾರ್ಯಕ್ರಮ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post