ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕುಂಭಮೇಳದಲ್ಲಿ #Kumbamela ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ #South Western Railway ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post