No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕುವೆಂಪು ಮಾನವೀಯ ನೆಲೆಯ ಉದಾತ್ತ ಚಿಂತಕರು: ಮಲ್ಲೇಪುರಂ ಜಿ. ವೆಂಕಟೇಶ ಅಭಿಪ್ರಾಯ

ಕುವೆಂಪು ಜನ್ಮ ಸಂಭ್ರಮ: ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2021
in ಬೆಂಗಳೂರು ನಗರ
0
ಕುವೆಂಪು ಮಾನವೀಯ ನೆಲೆಯ ಉದಾತ್ತ ಚಿಂತಕರು: ಮಲ್ಲೇಪುರಂ ಜಿ. ವೆಂಕಟೇಶ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕುವೆಂಪು ಅವರು 1949 ರಲ್ಲಿ ರಚಿಸಿದ ಮಹಾಕಾವ್ಯ ಶ್ರೀರಾಮಾಯಣದರ್ಶನಂ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿ. ‘ಪಾಪಿಗುದ್ದಾರಮಿಹುದೌಸೃಷ್ಟಿಯ ಮಹದ್‌ವ್ಯೂಹ ರಚನೆಯೊಳ್’ ಎಂಬ ಮಾನವೀಯ ನೆಲೆಯ ಉದಾತ್ತ ಚಿಂತಕರು ಅವರು ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅಭಿಪ್ರಾಯಪಟ್ಟರು.

ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥವನ್ನು  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಲೋಕಾರ್ಪಣೆ ಮಾಡಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್‌ರವರು ಗಾಂಧಿ ಶಾಂತಿ ಪ್ರತಿಷ್ಠಾನ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಉದಯ ಪ್ರಕಾಶನ ಸಹಯೋಗದಲ್ಲಿ ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ವಿಶಾಲ ದೃಷ್ಟಿಯಲ್ಲಿ ಮನೋವೈಜ್ಞಾನಿಕ ವಿಶ್ಲೇಷಣೆಯಲ್ಲಿ ಕುವೆಂಪು ಅವರು ದುಷ್ಟ ಪಾತ್ರಗಳಾದ ಮಂಥರೆ, ಕೈಕೆ, ವಾಲಿ, ಚಂದ್ರನಖಿ, ಮಾರೀಚ, ರಾವಣ ಮುಂತಾದ ಪಾತ್ರಗಳು ಪಶ್ಚಾತ್ತಾಪಗೊಂಡು ಆತ್ಮ ಶೋಧಕ್ಕೆ ಒಳಗಾಗುವಂತೆ ಮರುಸೃಷ್ಟಿಸಿದ್ದಾರೆ. ಆ ಮಹಾಕಾವ್ಯ ಪ್ರವೇಶಕ್ಕೆ ಹಲವು ಗದ್ಯ ರೂಪಿ ಕೃತಿಗಳು ಈಗಾಗಲೇ ಹೊರಬಂದಿವೆ. ಜಿ. ಕೃಷ್ಣಪ್ಪನವರು ಆ ಮಹಾಕಾವ್ಯದ ದರ್ಶನ ದೀಪ್ತಿಗೆ ಒಳಗಾಗಿ ಅದನ್ನು ‘ವಚನ ದೀಪಿಕೆ’ಯಾಗಿ ನೀಡಿದ್ದಾರೆ. ಇದು ಕುವೆಂಪು ಕಾವ್ಯ ಸಹೃದಯರಿಗೆ ಆಪ್ತವಾಗುವ ಸರಳ, ಸುಂದರ ಶೈಲಿಯಲ್ಲಿದೆ ಎಂದು ಹೇಳಿದರು.

ಮೂಲಕಾವ್ಯವನ್ನು ಅಭ್ಯಾಸ ಮಾಡುವ ಆಸಕ್ತರಿಗೆ ಉಪಯುಕ್ತವಾಗುವ ಶ್ರೀ ರಾಮಾಯಣದರ್ಶನಂ ನಿಘಂಟು’ ಇದರ ಜೊತೆಯಲ್ಲಿರುವುದು ಈ ಕೃತಿಯ ವಿಶೇಷ. ಬೇಂದ್ರೆ ಕೃಷ್ಣಪ್ಪನವರು ಮಹಾಕವಿ ಕುವೆಂಪು ಅವರ ಕಾವ್ಯರಸಾಬ್ಧಿಯಲ್ಲಿ ಮಿಂದು ರಚಿಸಿರುವ ಈ ಕೃತಿ ಕನ್ನಡ ಸಾಹಿತ್ಯಕ್ಕೆ ನೀಡಿದ ಉತ್ತಮ ಕೊಡುಗೆಯಾಗಿದೆ ಎಂದು ಹೇಳಬಹುದು ಎಂದು ಅಭಿಪ್ರಾಯಪಟ್ಟರು.

ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ. ವೂಡೇ.ಪಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡರವರು ಗ್ರಂಥದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಭಾಗವಹಿಸಿದ್ದರು

ಶ್ರೀರಾಮಾಯಣ ದರ್ಶನಂ ಕಾವ್ಯ ವಾಚನವನ್ನು ವಿದ್ವಾನ್ ಖಾಸಿಂ ಮಲ್ಲಿಗೆಮಡುವುರವರು ನಡೆಸಿಕೊಟ್ಟರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್. ಸತೀಶ್ ಹಾಗೂ ಅನ್ನಪೂರ್ಣ ಪಬ್ಲಿಷಿಂಣ್ ಹೌಸ್ ನ ಸುರೇಶ್ ಬಿ.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteKuvempuLatest News KannadaNews in KannadaNews KannadaShri Ramayanadarshanamಕುವೆಂಪುಬೆಂಗಳೂರುಶ್ರೀರಾಮಾಯಣದರ್ಶನಂ
Share197Tweet123Send
Previous Post

ಹಿಂದೂ ದೇಗುಲಗಳಿಗೆ ಸ್ವಾಯತ್ತತೆ ನೀಡುವ ಸಿಎಂ ನಿರ್ಧಾರ ಸ್ವಾಗತಾರ್ಹ: ಎಸ್. ದತ್ತಾತ್ರಿ

Next Post

ತರಬೇತಿ ಕಾರ್ಯಾಗಾರಕ್ಕೆ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತರಬೇತಿ ಕಾರ್ಯಾಗಾರಕ್ಕೆ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಚಾಲನೆ

ತರಬೇತಿ ಕಾರ್ಯಾಗಾರಕ್ಕೆ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL