ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ನೇಮಕ ಮಾಡಿದ್ದ ತಜ್ಞರ ಸಮಿತಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿತು.

ಭಾರಿ ಭೂ-ಕುಸಿತ ಪ್ರಕರಣಗಳನ್ನು ನೈಸರ್ಗಿಕ ವಿಪತ್ತು ವ್ಯಾಖ್ಯೆ ಅಡಿ ತರಬೇಕು. ಭೂ-ಕುಸಿತ ನಿಯಂತ್ರಣ ಮಾರ್ಗೋಪಾಯಗಳ ಬಗ್ಗೆ ಕ್ರಿಯಾಯೋಜನೆ ರೂಪಿಸಿ, ಭೂ-ಕುಸಿತ ಸಾಧ್ಯತೆ ಇರುವ ಪ್ರದೇಶಗಳ ನಕ್ಷೆ ರಚಿಸಬೇಕು ಎಂಬ ಸಲಹೆಗಳ ಜೊತೆಗೆ ಭೂ-ಕುಸಿತದಿಂದ ಉಂಟಾಗಿರುವ ಆಸ್ತಿ ಹಾನಿ ಮತ್ತು ಪ್ರಾಣ ಹಾನಿಗೆ ಪರಿಹಾರ ಮತ್ತು ಪುನರ್ವಸತಿ ಬಗ್ಗೆ ಸೂಕ್ತ ಸಲಹೆಗಳು ಸಹ ವರದಿಯಲ್ಲಿ ಮೂಡಿಬಂದಿವೆ ಎಂದು ಮುಖ್ಯ ಮಂತ್ರಿಗಳು ಹೇಳಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	

 Loading ...
 Loading ... 
							



 
                
Discussion about this post