No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಸಿಎಂ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2021
in ಬೆಂಗಳೂರು ನಗರ
0
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಸಿಎಂ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.


ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ& ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ, ಸೂಚಿಸಿರುವಂತೆ ಅನುಸೂಚಿತ ಮೀಸಲು ಅರಣ್ಯ ಪ್ರದೇಶ ಡಿನೋಟಿಫಿಕೇಷನ್ ನಿರ್ಧಾರ ಕೈಗೊಳ್ಳುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳು ರಚಿಸಿದ್ದ ಟಾಸ್ಕ್ ಫೋರ್ಸ್ ಕ್ರಿಯಾಶೀಲಗೊಳಿಸಲು ಟಾಸ್ಕ್ ಫೋರ್ಸ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆಯನ್ನು ನಡೆಸಬೇಕಿದ್ದು, ಈ ಕಾರ್ಯವನ್ನು 3-5 ತಿಂಗಳೊಳಗಾಗಿ ಮುಕ್ತಾಯ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇದಕ್ಕಾಗಿ ವಿಶೇಷ ಜಿಲ್ಲಾಧಿಕಾರಿ, ಅರಣ್ಯ ವ್ಯವಸ್ಥಾಪನಾಧಿಕಾರಿಗಳನ್ನು ತಕ್ಷಣವೇ ನೇಮಿಸಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದರು.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿಗಳನ್ನು ಪುನರ್ ನಿಗದಿಪಡಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಶಿವಮೊಗ್ಗ ನಗರದ ಪ್ರಮುಖ ಭಾಗಗಳು ಸೇರಿದಂತೆ ಜನವಸತಿ ಹಾಗೂ ಸರ್ಕಾರಿ ಕಟ್ಟಡಗಳಿರುವ ಪ್ರದೇಶಗಳು ಅಭಯಾರಣ್ಯದ ವ್ಯಾಪ್ತಿಗೆ ಬರುತ್ತಿದ್ದು, ಗಡಿ ಪುನರ್ ನಿಗದಿಪಡಿಸುವುದರಿಂದ ಸಮಸ್ಯೆ ಬಗೆಹರಿಸಬಹುದು ಎಂದರು.

ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಲಾಗಿದ್ದು, ವನ್ಯಜೀವಿ ಪ್ರದೇಶವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಗಡಿ ನಿಗದಿಪಡಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಲು ಗಣಿಗಾರಿಕೆ:
ಕಲ್ಲು ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗಿದೆ ಎಂದು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬಾರದ ಪರವಾನಗಿ ಹೊಂದಿರುವ ಕಲ್ಲು ಗಣಿಕಾರಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ, ಹಾಗೂ ವಾರದೊಳಗೆ ಸಾಧ್ಯವಿರುವಲ್ಲಿ ಕಲ್ಲು ಗಣಿಗಾರಿಕೆಯನ್ನು ಪ್ರಾರಂಭಿಸಲು ಅನುಮತಿ ನೀಡಲು ಅವರು ಸೂಚಿಸಿದರು.

ಸಂರಕ್ಷಿತ ಅರಣ್ಯ:
ಸಂರಕ್ಷಿತ ಅರಣ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ತಿಳಿಸಿದರು.

ಶಿವಮೊಗ್ಗ, ಶಿಕಾರಿಪುರ – ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಅರಣ್ಯ ಇಲಾಖೆ ಯೋಜನೆಗಳ ಪ್ರಗತಿಯ ವೇಗ ಹೆಚ್ಚಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಶಿವಮೊಗ್ಗ ಜಿಲ್ಲೆಗೆ ವಿಶೇಷ ಅರಣ್ಯ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಅರಣ್ಯ ಭೂಮಿ ಗುತ್ತಿಗೆ ನವೀಕರಣಕ್ಕೆ ಅರಣ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಚಿವರಾದ ಅರಬೈಲ್ ಶಿವರಾಮ್, ಆರಗ ಜ್ಞಾನೇಂದ್ರ, ಉಮೇಶ್ ಕತ್ತಿ, ಸುನಿಲ್ ಕುಮಾರ್, ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Arga GnanendraBangaloreCM Basavaraj BommaiFormer CM YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಆರಗ ಜ್ಞಾನೇಂದ್ರಬೆಂಗಳೂರುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ವಿಶ್ವೇಶ್ವರಯ್ಯನವರನ್ನು ಪಡೆದಿರುವುದು ಭಾರತದ ಸೌಭಾಗ್ಯ: ಅಶ್ಚಥನಾರಾಣ ಶೆಟ್ಟಿ ಅಭಿಪ್ರಾಯ

Next Post

ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಕೋವಿಡ್ ಮಾರ್ಗಸೂಚಿ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಕೋವಿಡ್ ಮಾರ್ಗಸೂಚಿ ಪರಿಶೀಲನೆ

ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಕೋವಿಡ್ ಮಾರ್ಗಸೂಚಿ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL