Wednesday, March 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇತಿಹಾಸ ಅರಿತು ದೇಶ ಉಳಿಸಲು ಮುಂದಾಗಿ: ಎನ್‌ಎಸ್‌ಯುಐ ಪದಾಧಿಕಾರಿಗಳಿಗೆ ಸಿದ್ಧರಾಮಯ್ಯ ಕರೆ

September 1, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರೆ ಮೊದಲು ಈ ದೇಶ ಮಾರಾಟ ಆಗದಂತೆ ತಡೆಯಬೇಕು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ದೇಶವನ್ನೇ ಮಾರಾಟ ಮಾಡುತ್ತಿದೆ. ಈ ದೇಶದಲ್ಲಿ ವಿದ್ಯಾರ್ಥಿಗಳಿಗೂ ಭವಿಷ್ಯವಿದೆ. ಆದ್ದರಿಂದ ಇತಿಹಾಸವನ್ನು ಚೆನ್ನಾಗಿ ಅರಿತು ದೇಶ ಉಳಿಸಲು ಮುಂದಾಗಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್‌ಯುಐ) ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ವಿದ್ಯಾರ್ಥಿ ಸಮೂಹಕ್ಕೆ ದೇಶದ ಚರಿತ್ರೆಯನ್ನು ಅರ್ಥ ಮಾಡಿಸುತ್ತಲೇ ಸಂವಿಧಾನದ ಮಹತ್ವವನ್ನು ತಿಳಿಸಿ ಶಿಕ್ಷಣ-ಸಂಘಟನೆ-ಹೋರಾಟದ ಮಾರ್ಗದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಅವರು ಕರೆ ನೀಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ವಿದ್ಯಾರ್ಥಿ ಕಾಂಗ್ರೆಸ್‌ಗೆ 1971 ರಲ್ಲಿ ಇಂದಿರಾಗಾಂಧಿ ಅವರು ಅಡಿಪಾಯ ಹಾಕಿದರು. ದೇಶದ ವಿದ್ಯಾರ್ಥಿ-ಯುವಜನರನ್ನು ಸೃಜನಶೀಲರನ್ನಾಗಿ, ಪ್ರಜಾತಾಂತ್ರಿಕ ಮಾರ್ಗದಲ್ಲಿ ಸನ್ನದ್ದ ಗೊಳಿಸಿದರೆ ದೇಶವನ್ನು 21 ನೇ ಶತಮಾನಕ್ಕೆ ಮುನ್ನಡೆಸಲು ಸಾಧ್ಯವಿದೆ ಎಂದು ರಾಜೀವ್‌ಗಾಂಧಿ ಅವರು ಆತ್ಮವಿಶ್ವಾಸದಿಂದ ನುಡಿದಿದ್ದರು. ರಾಹುಲ್‌ಗಾಂಧಿ ಅವರು ವಿದ್ಯಾರ್ಥಿ ಕಾಂಗ್ರೆಸ್‌ಗೆ ಕಾನೂನು ಬದ್ದ ಚೌಕಟ್ಟು ನೀಡಿದರು. ಹೀಗಾಗಿ ಇಂದು ವಿದ್ಯಾರ್ಥಿ ಸಂಘಟನೆ ಮತ್ತು ವಿದ್ಯಾರ್ಥಿ ಚಳವಳಿ ಇಡಿ ದೇಶಕ್ಕೆ ವ್ಯಾಪಿಸಿದೆ. ಸಾಮಾಜಿಕ ಚಳವಳಿಗಳು ವಿದ್ಯಾರ್ಥಿಗಳು ಸಮಾಜವನ್ನು ಗ್ರಹಿಸಲು, ದೇಶದ ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಲು ನೆರವಾಗುತ್ತವೆ. ಈ ದಿಕ್ಕಿನಲ್ಲಿ ವಿದ್ಯಾರ್ಥಿ ಸಮೂಹ ತಮ್ಮ ಇತಿಹಾಸ ಪ್ರಜ್ಞೆಯನ್ನು ಹೆಚ್ಚಿಸಿಕೊಂಡು ದೇಶದ ಪ್ರಜಾಪ್ರಭುತ್ವದ ಅಡಿಪಾಯನ್ನು ಗಟ್ಟಿಗೊಳಿಸಬೇಕು ಎಂದರು.


“ಇತಿಹಾಸ ಗೊತ್ತಿಲ್ಲದವನು ಭವಿಷ್ಯ ರೂಪಿಸಲಾರ” ಎಂದು ನಮ್ಮ ಹಿರಿಯರು ಹೇಳಿದ್ದರು. ಇಡೀ ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ದೇಶ ನಿರ್ಮಾಣದ ಚರಿತ್ರೆಯೇ ಇಲ್ಲ. ಕಳೆದ 75 ವರ್ಷಗಳಿಂದ ಈ ದೇಶದ ಆಸ್ತಿಯನ್ನು ನಿರ್ಮಿಸಿದವರು ಈ ದೇಶದ ಜನ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ. ನರಸಿಂಹರಾವ್, ರಾಜೀವ್‌ಗಾಂಧಿ, ಮನಮೋಹನ್‌ಸಿಂಗ್ ಅವಧಿಯಲ್ಲಿ ದೇಶದ ಜನ ನಿರ್ಮಿಸಿದ ದೇಶದ ಆಸ್ತಿಗಳನ್ನು ಬಿಜೆಪಿ ಮುಲಾಜಿಲ್ಲದೆ ಮಾರಾಟ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


ಈ ಬಿಜೆಪಿಯವರಿಗೆ ದೇಶದ ಆಸ್ತಿಯನ್ನು ನಿರ್ಮಿಸಿದ, ದೇಶ ಕಟ್ಟಿದ ಅನುಭವವಾಗಲೀ, ಚರಿತ್ರೆಯಾಗಲೀ ಇಲ್ಲ. ಹೀಗಾಗಿ ಈ ದೇಶದ ಬಗ್ಗೆ ಯಾವುದೇ ಭಾವನಾತ್ಮಕ ಸಂಬಂಧವೂ ಇಲ್ಲದಂತೆ ಇಡಿ ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿದ್ದಾರೆ. ದೇಶದ ಆಸ್ತಿ ಮಾರಾಟ ಮಾಡುವಾಗ ವಿದ್ಯಾರ್ಥಿ-ಯುವಜನರು ಇದನ್ನೆಲ್ಲಾ ತಿಳಿದುಕೊಳ್ಳದಂತೆ, ಪ್ರಶ್ನಿಸದಂತೆ ಮಾಡಲು ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ಹಿಂದೂ-ಮುಸ್ಲಿಂ, ಪಾಕಿಸ್ತಾನ-ಚೀನಾ ವಿಚಾರಗಳಲ್ಲಿ ನಿಮ್ಮನ್ನು ಕಟ್ಟಿಹಾಕಿ ಬಿಜೆಪಿಯವರು ನಿಮ್ಮ ಭವಿಷ್ಯವನ್ನೂ ಮಾರಾಟ ಮಾಡುತ್ತಿದ್ದಾರೆ. ಪ್ರತೀ ದಿನ ನಿರಂತರ ಸುಳ್ಳುಗಳ ಮೂಲಕ ವಿದ್ಯಾರ್ಥಿ ಯುವಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದರು.

ಯುವಕರು ಹಾದಿ ತಪ್ಪಬಾರದು. ನಿಮಗೆ ಸತ್ಯ ಗೊತ್ತಾಗಬೇಕು ಎಂದರೆ ಶಿಕ್ಷಿತರಾಗಬೇಕು. ಈ ದೇಶದ ದಲಿತ-ಶೂದ್ರ ಸಮುದಾಯವನ್ನು ಹಲವು ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದು ಯಾರು ಎನ್ನುವುದನ್ನು ಯಾವತ್ತಾದರೂ ಪ್ರಶ್ನಿಸಿದ್ದೀರಾ ? ಈ ದೇಶದ ಮಹಿಳೆಯರನ್ನೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಆದರೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಎಲ್ಲರಿಗೂ ಶಿಕ್ಷಣದ ಹಕ್ಕನ್ನು ನೀಡಿತು. ಇದರಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಕೇವಲ ಶೇ 18 ರಷ್ಟಿದ್ದ ಶಿಕ್ಷಿತ ಮಹಿಳೆಯರ ಪ್ರಮಾಣ ಈಗ ಶೇ 78 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.


ಶಿಕ್ಷಿತರ ಪ್ರಮಾಣ ಹೆಚ್ಚಾದಷ್ಟೂ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಬೇಕಿತ್ತು. ಆದರೆ ಶಿಕ್ಷಿತರೆ ಇಂದು ಜಾತಿ ವ್ಯವಸ್ಥೆಯ-ಕೋಮುವಾದದ ಪೋಷಿತರಾಗಿ ದೇಶವನ್ನು ಅಪಾಯಕ್ಕೆ ದೂಡುತ್ತಿರುವುದು ಆತಂಕಕಾರಿಯಾಗಿದೆ ಎಂದರು.

ಈ ದೇಶದ ಜಾತಿ ವ್ಯವಸ್ಥೆ ಸಮಾಜದಲ್ಲಿ ಯಾರನ್ನೂ ಒಗ್ಗಟ್ಟಾಗಿ, ನೆಮ್ಮದಿಯಾಗಿ ಬದುಕಲು ಬಿಡುವುದಿಲ್ಲ. ಜತೆಗೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಂಡಿದ್ದ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಮಸಮಾಜ ನಿರ್ಮಾಣದ ಆಶಯವನ್ನು, ಜಾತ್ಯತೀತತೆಯನ್ನು , ಸಮಾನತೆಯನ್ನು, ಸರ್ವಧರ್ಮ ಸಹೋದರತ್ವವನ್ನು, ಪರಧರ್ಮ ಸಹಿಷ್ಣುತೆಯನ್ನು, ಸಾಮಾಜಿಕ ನ್ಯಾಯವನ್ನು ಸೇರಿಸಿದರು ಎಂದು ಹೇಳಿದರು.

ಅಂಬೇಡ್ಕರ್ ಅವರ ಸಂವಿಧಾನವನ್ನು ನೆಹರೂ, ಇಂದಿರಾಗಾಂಧಿ ಸೇರಿ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಅಪ್ಪಿಕೊಂಡರು. ಹೀಗಾಗಿ ಸಮಸಮಾಜದ ವಿರೋಧಿಗಳಾದ, ಜಾತ್ಯತೀತತೆಯ ಶತ್ರುಗಳಾದ ಬಿಜೆಪಿಯವರು ಸಂವಿಧಾವನ್ನು ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳು ಇತಿಹಾಸದುದ್ದಕ್ಕೂ ನಡೆದುಕೊಂಡು ಬಂದಿದ್ದು ಇದನ್ನೆಲ್ಲಾ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಕಳೆದ 75 ವರ್ಷಗಳಲ್ಲಿ ದೇಶದಲ್ಲಿ ನಿರ್ಮಾಣ ಆಗಿರುವ ಆಸ್ತಿಗಳನ್ನು ಮಾರಾಟ ಮಾಡಲು ಅನುಕೂಲ ಆಗುವಂತೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯಗಳ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಶಿಕ್ಷಣ ಮತ್ತು ಕೃಷಿ ಸಂವಿಧಾನದ ಸಮವರ್ತಿ ಮತ್ತು ರಾಜ್ಯ ಪಟ್ಟಿಯಲ್ಲಿ ಬರುತ್ತವೆ. ಆದರೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಿತ್ತುಕೊಂಡು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ದೇಶಾದ್ಯಂತ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗೆಯೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವಾಗಲೂ ರಾಜ್ಯಗಳ ಜತೆ ಚರ್ಚಿಸಿಲ್ಲ. ಪಾರ್ಲಿಮೆಂಟಿನಲ್ಲೂ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆಯಲ್ಲೂ ಚರ್ಚೆ ಆಗಿಲ್ಲ. ಚರ್ಚೆಯೇ ಆಗದ ರಾಷ್ಟೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿ ಮಾಡುತ್ತಿದೆ ಎಂದರು.

ಚರ್ಚೆ ಆದರೆ ವಿದ್ಯಾರ್ಥಿಗಳು ಈ ನೀತಿಯಲ್ಲಿರುವ ಹುಳುಕುಗಳನ್ನು, ತಮ್ಮ ಭವಿಷ್ಯಕ್ಕೆ ಮಾರಕ ಆಗಿರುವ ಸಂಗತಿಗಳನ್ನು ಪ್ರಶ್ನಿಸುತ್ತಾರೆ ಎನ್ನುವ ಕಾರಣಕ್ಕೆ ಚರ್ಚೆಯೆ ಇಲ್ಲದೆ ಜಾರಿ ಮಾಡಲಾಗುತ್ತಿದೆ. ಈ ಎಲ್ಲಾ ಹುನ್ನಾರ ಮತ್ತು ಸಂಚುಗಳನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಬಸವಣ್ಣನವರ “ಇವನಾರವ ಇವನಾರವ” ವಚನದ ಸಾಲುಗಳನ್ನು ಹೇಳಿ ಕುವೆಂಪು ಅವರ ವಿಚಾರಶೀಲರಾಗಿ ಎನ್ನುವ ಸಂದೇಶವನ್ನು ವಿದ್ಯಾರ್ಥಿ ಸಮೂಹಕ್ಕೆ ನೀಡುವ ಮೂಲಕ ಜಾಗೃತರಾಗಲು ಕರೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNSUIState Newsಎನ್‌ಎಸ್‌ಯುಐ‌ಬೆಂಗಳೂರು:
Previous Post

ತಮ್ಮ ಸಂಪುಟದಲ್ಲಿ ಪ್ರತಿಭಾವಂತ ಸಚಿವರಿದ್ದಾರೆ: ಸಿಎಂ ಬೊಮ್ಮಾಯಿ ಮೆಚ್ಚುಗೆ

Next Post

ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಡಿ.ಎಸ್. ಅರುಣ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಡಿ.ಎಸ್. ಅರುಣ್ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!