ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸನಾತನ ಧರ್ಮದ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ Udayanidhi Stalin ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ ಸ್ಥಳೀಯ ಪರಮೇಶ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 4ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಅವರು, ಕಳೆದ ವರ್ಷ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸಿ ವಿವಾದವನ್ನು ಹುಟ್ಟುಹಾಕಿದ್ದರು.
Also read: ಸಂಸದ ಡಿ.ಕೆ. ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಿಸಿ: ಕೋರ್ಟ್ ಮೊರೆ ಹೋದ ವಕೀಲ
ಸೆ.2023 ರಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ತಮ್ಮ ಹೇಳಿಕೆಗೆ ಹಿನ್ನಡೆಯ ನಡುವೆಯೂ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಎಂದೆಂದಿಗೂ ವಿರೋಧಿಸುವುದಾಗಿ ಹೇಳಿದ್ದರು. ಅರ್ಜಿದಾರ ಪರಮೇಶ್ ಪರ ವಾದ ಮಂಡಿಸಿದ ವಕೀಲ ಧರ್ಮಪಾಲ್, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ವಿರೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಡೆಂಗ್ಯೂ, ಮಲೇರಿಯಾದಂತೆ ಓಡಿಸಬೇಕು ಎಂದು ಸನಾತನ ಧರ್ಮದ ಬಗ್ಗೆ ಕಾಮೆಂಟ್ ಮಾಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post