ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭ್ರಷ್ಟಾಚಾರ, ಪರ್ಸಂಟೇಜ್ ವ್ಯವಹಾರ ನಮ್ಮ ಸರ್ಕಾರದಲ್ಲಿ ನಡೆಯಲ್ಲ. ಪದೇ ಪದೇ ಆಪಾದನೆ ಮಾಡುವುದು ಸರಿಯಲ್ಲ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಕಾಂಗ್ರೆಸ್ ನಿಲ್ಲಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ Minister Ashwathnarayan ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ Randeep Singh Surjewala ಅವರು ರಾಜ್ಯ ಸರ್ಕಾರದ ಮೇಲೆ 40% ಆರೋಪ ಮಾಡಿದ್ದಾರೆ. ಸುರ್ಜೇವಾಲಾ ಅವರಿಗೆ ನಮ್ಮ ಸರ್ಕಾರದ ಬಗ್ಗೆ ಮಾಹಿತಿ ಇಲ್ಲ. ಮೊದಲು ಕಾಂಗ್ರೆಸ್ನಲ್ಲಿನ ಭ್ರಷ್ಟಾಚಾರ ಸಂಸ್ಕೃತಿಯನ್ನು ಅಳಿಸಲಿ. ಭ್ರಷ್ಟಾಚಾರವನ್ನು ಹುಟ್ಟುಹಾಕಿದ್ದೇ ಕಾಂಗ್ರೆಸ್. ಅವರ ಸಂಸ್ಕೃತಿಯೇ ಭ್ರಷ್ಟಾಚಾರದಿಂದ ಕೂಡಿದೆ. ಅದನ್ನು ನಿರ್ನಾಮ ಮಾಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರ ಕುರಿತು ನನಗೆ ಹೆಚ್ಚು ಮಾಹಿತಿ ಇಲ್ಲ. ಮಾಹಿತಿ ಪಡೆದು ಹೇಳುತ್ತೇನೆ. ಪ್ರಾಥಮಿಕ ವರದಿ ಬರಲಿ. ವರದಿಯಲ್ಲಿ ಏನು ಸತ್ಯಾಂಶ ಬರಲಿದೆ ಅನ್ನೋದು ನೋಡೋಣ ಎಂದು ಹೇಳಿದರು.
Also read: ಸಂತೋಷ್ ಯಾರೆಂದು ಗೊತ್ತಿಲ್ಲ, ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post