ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ DKShivakumar ಹಾಗೂ ಸಿದ್ದರಾಮಯ್ಯ ಮಧ್ಯೆ ಸ್ಪರ್ಧೆ ಏರ್ಪಟಿದ್ದು, ಸಿದ್ದರಾಮಯ್ಯ Siddaramaiah ಅವರಿಗೆ ಹೈ ಕಮಾಂಡ್ ಸಿಎಂ ಹುದ್ದೆ ಕೊಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮುದಾಯದ ಶೇ.80 ಜನರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಇದು ಸಿದ್ದರಾಮಯ್ಯರಿಗೆ ಕಡೆಯ ಚುನಾವಣೆ ಆಗಿದೆ. ಹಾಗೂ 13 ಬಾರಿ ಬಜೆಟ್ ಮಂಡಿಸಿ ಅನುಭವ ಇದೆ. ಸಿದ್ದರಾಮಯ್ಯರನ್ನು ಸಿಎಂ ಆಗಿ ಘೋಷಣೆ ಮಾಡಬೇಕು. ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ Sonia Gandhi ಹಾಗೂ ರಾಹುಲ್ ಗಾಂಧಿ Rahul Gandhi ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಾರ್ಯಾಧ್ಯಕ್ಷ ಸುಬ್ರಮಣ್ಯ ಮಾತನಾಡಿ, ಈ ಹಿಂದೆ ಸಿಎಂ ಆಗಿದ್ದಾಗ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದರು. ಈಗ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು. 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾಗಿ ಅವರು ಆರ್ಥಿಕ ತಜ್ಞರಾಗಿದ್ದಾರೆ. ಅವರು ಬಂದರೆ ಗ್ಯಾರಂಟಿಗಳನ್ನು ಈಡೇರಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post