ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೈತ್ರಿಕೂಟದ ಪಕ್ಷಗಳು ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಧಾನಿ ಅಭ್ಯರ್ಥಿ ಆಗಲಿ ಎಂದು ಹೇಳುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಮಾತ್ರ ರಾಹುಲ್ ಗಾಂಧಿ Rahul Gandhi ಪ್ರಧಾನಿಯಾಗಲಿ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ದಲಿತರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಹೇಳಿದರು.
ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, MamathaBanarji ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ArvindKejriwal ಸೇರಿದಂತೆ ಮೈತ್ರಿಕೂಟದ 16 ಪಕ್ಷಗಳ ನಾಯಕರು ಖರ್ಗೆ ಪ್ರಧಾನಿ ಅಭ್ಯರ್ಥಿ ಆಗಲಿ ಎನ್ನುತ್ತಿದ್ದಾರೆ. ಆದರೆ, ಸಿದ್ದರಾಮಣ್ಣ ಮಾತ್ರ ರಾಹುಲ್ ಗಾಂಧಿ ಪಿಎಂ ಆಗಬೇಕು ಅಂತಾರೆ. ಅಂದರೆ, ರಾಹುಲ್ ಗಾಂದಿ ಋಣ ತೀರಿಸಬೇಕು ಅವರು. ಅದಕ್ಕೆ ಹೀಗೆ ಹೇಳುತ್ತಿದ್ದಾರೆ ಟಾಂಗ್ ನೀಡಿದರು.

Also read: ಶ್ರೀ ವ್ಯಾಸತೀರ್ಥವಿದ್ಯಾಪೀಠದ 8ನೇ ವಾರ್ಷಿಕೋತ್ಸವ
ಖರ್ಗೆ ಅವರ ತ್ಯಾಗದಿಂದ ಸಿದ್ದರಾಮಯ್ಯ ಅವರು ಈ ಸ್ಥಾನದಲ್ಲಿ ಇದ್ದಾರೆ. ಹಿಂದೆ ಅವರನ್ನು ಪ್ರತಿಪಕ್ಷ ಸ್ಥಾನದಿಂದ ಒಕ್ಕಲೆಬ್ಬಿಸಿದ್ದವರು ಕೂಡ ಇವರೇ. ಪರಮೇಶ್ವರ ಅವರು ಸಿಎಂ ಆಗದಂತೆ ತಡೆದವರು ಕೂಡ ಇವರೇ. ಆದರೂ ತಾವು ದಲಿತೋದ್ಧಾರಕ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದನ್ನು ಆ ಸಮುದಾಯದ ಜನರು ನಂಬುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು










Discussion about this post