No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರ್ಕಾರ ಪತ್ರಕರ್ತರ ಬೇಡಿಕೆ ಈಡೇರಿಸಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲಗೌಡರು

ಬೇಡಿಕೆ ಈಡೇರಿಸದಿದ್ದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಲು ಮುಂದಾಳತ್ವ ವಹಿಸುವೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 25, 2023
in ಬೆಂಗಳೂರು ನಗರ
0
ಸರ್ಕಾರ ಪತ್ರಕರ್ತರ ಬೇಡಿಕೆ ಈಡೇರಿಸಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲಗೌಡರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ರಾಜ್ಯದ ಪತ್ರಕರ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿಗಳಾದ ವಿ. ಗೋಪಾಲ ಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಡಿ. 23ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಲಾದ `ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಪತ್ರಿಕಾರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ದೇಶದ ಸರ್ವೊಚ್ಛ ನ್ಯಾಯಾಲಯವೇ ಸ್ಪಷ್ಟವಾಗಿ ಹೇಳಿದೆ. ರಾಜ್ಯದಲ್ಲಿ ಸರಿ ಸುಮಾರು ಹದಿನಾರು ಸಾವಿರ ಪತ್ರಕರ್ತರು ಒಂದಿಲ್ಲೊಂದು ಸುದ್ದಿ ಮಾಧ್ಯಮಗಳ ಮೂಲಕ ತಮ್ಮ ಹರಿತವಾದ ಲೇಖನಿಯ ಮೂಲಕ ಸಮಾಜದ ಅಂಕು, ಡೊಂಕು ತಿದ್ದುವುದರೊಂದಿಗೆ ಸರ್ಕಾರಗಳ ಕಣ್ಣು ತೆರೆಯಿಸುವ ಕೆಲಸ ಮಾಡುತ್ತಿದ್ದಾರೆ. ಜೀವದ ಹಂಗು ತೊರೆದು ಸಮಾಜದ ಒಳಿತಿಗಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ನ್ಯಾಯಯುತವಾಗಿ ಸಿಗಬೇಕಾದ ಮೂಲ ಸೌಲಭ್ಯಗಳು ಸಿಗದಿರುವುದು ನಿಜಕ್ಕೂ ದುರ್ದೈವದ ಸಂಗತಿ” ಎಂದು ವಿಷಾದ ವ್ತಕ್ತಪಡಿಸಿದರು.

“ಯಾವುದೇ ಸರ್ಕಾರಗಳು 145 ಕೋಟಿ ಜನಸಂಖ್ಯೆಗೆ ಸುಗಮವಾದ ಆಡಳಿತ ನೀಡಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವವಾದುದು ಎಂಬುದನ್ನು ಮನಗಾಣಬೇಕಾಗಿದೆ. ಈ ದಿಸೆಯಲ್ಲಿ ಇಂದು ನಡೆಯುತ್ತಿರುವ ವಿಚಾರ ಸಂಕಿರಣ ಮಹತ್ವ ಹೊಂದಿದೆ. ನಮ್ಮನ್ನಾಳುತ್ತಿರುವ ರಾಜಕಾರಣಿಗಳು, ರಾಜಕೀಯ ಮುತ್ಸದಿಗಳು, ಕಾರ್ಯಾಂಗದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು, ನ್ಯಾಯಾಂಗದಲ್ಲಿ ಕಾರ್ಯ ನಿರ್ವಹಿಸುವ ನ್ಯಾಯಾಂಗ ಇಲಾಖೆ, ಬುದ್ಧಿ ಜೀವಿಗಳು, ಸಾಮಾಜಿಕ ಚಿಂತಕರು, ಸಮಾಜ ಸುಧಾರಕರು ಕೂಡ ದೀರ್ಘವಾಗಿ ಆಲೋಚಿಸಿ ಅರ್ಥೈಸಬೇಕಾದ ಸಮಯವಿದು. ಆ ದಿಕ್ಕಿನಲ್ಲಿ ಈ ವಿಚಾರ ಸಂಕಿರಣ ಬೆಂಗಳೂರು ಕೇಂದ್ರದಲ್ಲಿ ಎಲ್ಲಾ ಪತ್ರಕರ್ತರನ್ನು, ರಾಜಕಾರಣಿಗಳನ್ನು, ಧರ್ಮಗುರುಗಳನ್ನು, ವಿವಿಧ ಪಕ್ಷಗಳ ನೇತಾರರನ್ನು, ಸಮಾಜ ಸುಧಾರಕರನ್ನು, ಸಮಿತಿಗಳನ್ನು, ಕಲೆಯಲ್ಲಿ ಪರಿಣಿತಿ ಹೊಂದಿದ ಕಲೆಗಾರರನ್ನು, ಸಂಗೀತಗಾರರನ್ನು ಒಂದೆಡೆ ಸೇರಿಸಿ ಒಂದು ಅರ್ಥಪೂರ್ಣ ಸಮಾರಂಭ ಏರ್ಪಡಿಸಿರುವುದು ಶ್ಲಾಘನೀಯ. ಇಂತಹ ಅಭೂತಪೂರ್ವ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿರುವುದು ನನ್ನ ಜೀವನದ ಅವಿಸ್ಮರಣಿಯ ಕ್ಷಣ” ಎಂದರು.
“ಇಂತಹ ಹೃದಯಸ್ಪರ್ಷಿ ಸಮಾರಂಭಗಳನ್ನು ಏರ್ಪಡಿಸಿ ಸರ್ಕಾರದ ಗಮನ ಸೆಳೆಯುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸಮಾರಂಭ ನನ್ನಿಂದ ಉದ್ಘಾಟನೆಯಾಗಿರುವುದು ಸಂತಸ ತಂದಿದೆ. ನನ್ನ ಮನಸ್ಸು ದೇಶದ ಸಮಸ್ತ ಜನ, ಅದರ ಜೊತೆಗೆ ನಮ್ಮನ್ನು ಅವಲಂಭಿಸಿರುವ ಪ್ರಾಣಿ, ಪಕ್ಷಿಗಳೂ ಕೂಡ ನ್ಯಾಯಯುತವಾಗಿ ಧರ್ಮದ ಅಡಿಯಲ್ಲಿ ಸುಗಮವಾಗಿ ಜೀವನವನ್ನು ಮಾಡುವ ಜವಾಬ್ದಾರಿ ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮೇಲೆ ಅವಲಂಭಿತವಾಗಿರುತ್ತವೆ. ಜವಾಬ್ದಾರಿಯುತವಾದ ಸರ್ಕಾರಗಳು ಯಾವ ಸಮಸ್ಯೆಗಳ ಬಗ್ಗೆ ಸ್ಪಂದಿಸುತ್ತಿಲ್ಲವೋ ಅದು ಜನಪರವಾದ ಸರ್ಕಾರವಾಗಿರುವುದಿಲ್ಲ. ನಮ್ಮನ್ನಾಳುವ ರಾಜಕೀಯ ಪಕ್ಷಗಳು, ರಾಜಕೀಯ ನೇತಾರರು, ನೌಕರಶಾಹಿ ವರ್ಗ, ನ್ಯಾಯಾಂಗ ಇಲಾಖೆಯ ಜವಾಬ್ದಾರಿ ಹೊತ್ತಿರುವ ನ್ಯಾಯಾಧೀಶರುಗಳು ಎಲ್ಲಿ ಸಮಪರ್ಕವಾಗಿ ಆಡಳಿತ ನಡೆಯುತ್ತಿಲ್ಲವೋ ಅಂತಹ ಸಂದರ್ಭಗಳಲ್ಲಿ ನಾಗರಿಕ ಸಮಾಜದ ವ್ಯವಸ್ಥೆ ಸರಿಪಡಿಸಲು ಮುಂದಾಗಬೇಕು” ಎಂದರು.

Also read: ಜಾತಿ ಗಣತಿ ರಾಜಕೀಯ ಅಸ್ತ್ರ: ಬಸವರಾಜ ಬೊಮ್ಮಾಯಿ ಆರೋಪ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂವಿಧಾನದ ಅಡಿಯಲ್ಲಿ ಆಡಳಿತ ನೀಡಲು ವಿಫಲರಾದಾಗ, ಸರ್ಕಾರದ ಉತ್ತಮ ನೀತಿಗಳನ್ನು ಕಾರ್ಯಾಂಗ ಸಮರ್ಪಕವಾಗಿ ಅನುಷ್ಟಾನ ಮಾಡದಿದ್ದರೆ, ಅವರ ಕಾರ್ಯವೈಖರಿ ಪಾರದರ್ಶಕವಾಗಿಲ್ಲದಿದ್ದರೆ ಅದನ್ನು ಎತ್ತಿ ಹಿಡಿಯುವ ಸಂಪೂರ್ಣ ಜವಾಬ್ದಾರಿ ಪತ್ರಿಕಾರಂಗದ ಮೇಲಿದೆ. ಸುಸಂಸ್ಕøತ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಹಿರಿದಾದುದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು, 145 ಕೋಟಿ ಜನರ ಹಕ್ಕುಗಳನ್ನು ಸಂರಕ್ಷಣೆ ಮಾಡಲು, ಸಂವಿಧಾನವನ್ನು ಸಂರಕ್ಷಿಸಲು, ಪ್ರಜಾಪ್ರಭುತ್ವದ ವ್ಯವಸ್ಥೆ ಸಮರ್ಪಕವಾಗಿ ಎಲ್ಲಾ ಜನರಿಗೂ ಮುಟ್ಟಿಸಲು ಪತ್ರಕರ್ತರು ಅವಶ್ಯ. ಸರ್ಕಾರ ಜನಪರ ಆಡಳಿತ ನೀಡಲು ವಿಫಲರಾದಾಗ ಈ ರೀತಿಯ ಹೋರಾಟಗಳು, ಪ್ರತೀ ದೇಶದಲ್ಲಿ, ಪ್ರಪಂಚದಾದ್ಯಂತ ನಡೆಸುವುದು ಅನಿವಾರ್ಯವಾಗಿದೆ. ಈ ರೀತಿಯ ಹೋರಾಟ ನಡೆಸಲು ಜನರ ಬೆಂಬಲ ಬೇಕಾಗಿದೆ ಎಂದರು.
ಸಂವಿಧಾನದ ಅಡಿಯಲ್ಲಿ ಮೂರೇ ಅಂಗಗಳು ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ. ಇದರ ಜೊತೆಯಲ್ಲಿ ಸರ್ವೋಚ್ಛ ನ್ಯಾಯಾಲಯ ಹೇಳಿರುವ ಪ್ರಕಾರ ನಾಲ್ಕನೇ ಅವಿಭಾಜ್ಯ ಅಂಗ ಪತ್ರಿಕಾರಂಗ. ಈ ಪತ್ರಿಕಾರಂಗ ಕುಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ಅವರ ಓಡನಾಡಿ ಪತ್ರಕರ್ತರು ಕುಸಿದು ಹೋದರೆ ಸಂವಿಧಾನ ಕುಸಿದು ಹೋಗಬಹುದು. ರಾಜ್ಯದ ಆಡಳಿತ ಕುಸಿಯುತ್ತದೆ. ಭಾರತ ಸರ್ಕಾರದ ಆಡಳಿತ ಕುಸಿಯಬಹುದು. ಅಲ್ಲಿ ನಾಗರಿಕ ಸಮಾಜದ ವ್ಯವಸ್ಥೆ ಕುಸಿಯಬಹುದು” ಎಂದು ನ್ಯಾಯಮೂರ್ತಿಗಳು ಆತಂಕ ವ್ಯಕ್ತಪಡಿಸಿದರು.

“ಈ ಕಾರ್ಯಕ್ರಮದ ಮೂಲಕ ರಾಜ್ಯ ಸರ್ಕಾರಕ್ಕೆ ಕಿವಿ ಮಾತನ್ನು ಹೇಳಲು ಬಂದಿದ್ದೇನೆ. ರಾಜ್ಯ ಸರ್ಕಾರ ಈ ಕೂಡಲೇ ಪತ್ರಕರ್ತ ಮುಖಂಡರನ್ನು ಕರೆಯಿಸಿ ಮಾತುಕತೆ ನಡೆಸಿ ಪತ್ರಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ಸರ್ಕಾರ ಮಹಿಳೆಯರು ಸೇರಿದಂತೆ ವಿವಿಧ ವರ್ಗಗಳ ಜನತೆಗೆ ಉಚಿತ ಭಾಗ್ಯ ನೀಡುವುದಾದರೆ, ರಾಜ್ಯದಲ್ಲಿರುವ ಹದಿನಾರು ಸಾವಿರ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಯಾಕಾಗಿ ಹಿಂದೆ ಮುಂದೆ ಯೋಚಿಸುತ್ತಿರಾ? ಪತ್ರಕರ್ತರು ತಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ಪ್ರಯಾಣಿಸಲು ನಿಮ್ಮಿಂದ ಉಚಿತ ಬಸ್ ಪ್ರಯಾಣ ಕೇಳುತ್ತಿಲ್ಲ. ಬದಲಿಗೆ ಸಮಾಜದ ಆಗು ಹೋಗುಗಳು ಹಾಗು ನಿಮ್ಮದೇ ಸರ್ಕಾರದ ವಿವಿಧ ಕಾರ್ಯಯೋಜನೆಗಳ ತುಲನಾತ್ಮಕ ವರದಿಗಳಿಗಾಗಿ ಕೇಳುತ್ತಿರುವ ಬೇಡಿಕೆಗಳನ್ನು ಸಹಾನುಬೂತಿಯಿಂದ ನೀಡಬೇಕಾದುದು ಸರ್ಕಾರದ ಕರ್ತವ್ಯ. ಪತ್ರಕರ್ತರಿಗೆ ಯಾವುದೇ ಆದಾಯವಿಲ್ಲ, ನಿಗದಿತ ಸಂಬಳವಿಲ್ಲ, ಒಪ್ಪತ್ತಿನ ಊಟಕ್ಕೂ ಕೈಚಾಚುವಂತಹ ಹೀನಾಯ ಸ್ಥಿತಿ ಗ್ರಾಮೀಣ ಹಾಗೂ ನಗರ ಪ್ರದೇಶದ ಪತ್ರಕರ್ತರ ವಲಯದಲ್ಲಿದೆ. ಅವರಿಗೂ ಸಂಸಾರವಿದೆ, ಅವರ ನೋವಿಗೆ ಸ್ಪಂಧಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದರು.
Kalahamsa Infotech private limited`ಸರ್ಕಾರ ಸ್ಪಂದಿಸದಿದ್ದರೆ ನಾನೇ ದಾವೆ ಹೂಡಲು ಸಹಕರಿಸುವೆ’
“ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತುಕತೆ ನಡೆಸುವೆ. ಪತ್ರಕರ್ತರು ಈ ಬಗ್ಗೆ ಯಾವುದೇ ಚಿಂತೆ ಮಾಡುವುದು ಬೇಡ. ನಿಮ್ಮ ಸಮಸ್ಯೆಗಳ ಅರಿವು ನನಗೆ ತಿಳಿದಿದೆ. ಸರ್ಕಾರ ನನ್ನ ಮನವಿಗೂ ಸ್ಪಂದಿಸದಿದ್ದಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಲು ನಾನೇ ಮುಂದಾಳತ್ವ ವಹಿಸುವೆ” ಎಂದು ನಿವೃತ್ತ ನ್ಯಾಯ ಮೂರ್ತಿಗಳಾದ ವಿ. ಗೋಪಾಲ ಗೌಡ ಭರವಸೆ ನೀಡಿದರು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಜಾತಿ ಗಣತಿ ರಾಜಕೀಯ ಅಸ್ತ್ರ: ಬಸವರಾಜ ಬೊಮ್ಮಾಯಿ ಆರೋಪ

Next Post

Caste census: A political weapon, accuses Basavaraj Bommai

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

Caste census: A political weapon, accuses Basavaraj Bommai

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL