ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಟ್ರೋ ರವಿ Santro Ravi ತಮ್ಮ ನಿವಾಸದಲ್ಲಿ ಹಣ ಎಣಿಸಿದ್ದಾನೆ ಎಂಬುದು ಸುಳ್ಳು. ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ H D Kumaraswamy ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ತಮ್ಮ ಮೇಲೆ ಅವರು ಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ತಿರುಗೇಟು ನೀಡಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ. ಸ್ಯಾಂಟ್ರೋ ರವಿ ತಮ್ಮ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ ಎಂದು ಕುಹಕವಾಡಿದ್ದಾರೆ.

Also read: ಭೀಕರ ಚಳಿಗೆ ಉತ್ತರ ಭಾರತ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ಘೋಷಣೆ
ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಸ್ಯಾಂಟ್ರೋ ರವಿ ಜೊತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.












Discussion about this post