ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ Power star Puneeth Rajkumar ಅವರ ಜೀವನವನ್ನು ಅಳವಡಿಕೆ ಮಾಡಲಾಗಿದ್ದು, ಈ ಮೂಲಕ ದೊಡ್ಮನೆ ಹಾಗೂ ಅಪ್ಪು ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರ್ಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ವಾಣಿಜ್ಯ ಕನ್ನಡ 3′ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ.
ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ನೀನೇ ರಾಜಕುಮಾರ್’ ಕೃತಿಯ ಒಂದು ಅಧ್ಯಾಯವಾದ ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್. ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.
Also read: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ
ಮೊನ್ನೆಯಷ್ಟೇ ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೆಯ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post