ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಕ್ಷರ ಮಾಂತ್ರಿಕ ಎಂದೇ ಖ್ಯಾತರಾಗಿದ್ದ ಹಿರಿಯ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ(94) #S. L Byrappa ಇಂದು ವಿಧಿವಶರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ರಾಷ್ಟ್ರೋತ್ಥಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.

ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂಎನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು.
ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ ಸತ್ಯ ಮತ್ತು ಸೌಂದರ್ಯ, ಎಂಬ ಇಂಗ್ಲಿಷ್’ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.

ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್.ಎಲ್. ಬೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದ ಭೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 























Discussion about this post