ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗಾಗಿ ರಾಜ್ಯದಾದ್ಯಂತ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತ ತಿಂಡಿ ಹಾಗೂ ಊಟ ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಪೌರಾಡಳಿತ ನಿರ್ದೇಶಕರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮೇ 24ರವರೆಗೆ ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ವಿತರಿಸಲು ಸೂಚಿಸಿದ್ದಾರೆ.
ಪ್ರತಿದಿನ ಎಷ್ಟು ಜನರು ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸುತ್ತಾರೆ ಎಂಬ ವಿವರವನ್ನು ದಾಖಲಿಸಲು ಸಹ ಸೂಚಿಸಲಾಗಿದ್ದು, ಯೋಜನಾ ನಿರ್ದೇಶಕರು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಅದರ ಜವಾಬ್ಧಾರಿ ವಹಿಸಲಾಗಿದೆ. ಲಾಕ್‌ಡೌನ್‌ನಿಂದಾಗಿ ತೊಂದರೆಗೆ ಸಿಲುಕಿರುವ ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರನ್ನು ದೃಷ್ಟಿಯಲ್ಲಿಟ್ಟಕೊಂಡು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post