ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರೋಕ್ಷ ಸುಳಿವು ನೀಡಿದ್ದಾರೆ. ಸರ್ವಪಕ್ಷಗಳ ಸಭೆಯ ನಂತರ ಮಾತನಾಡಿರುವ ಅವರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಪ್ರಮುಖರು ನೀಡಿರುವ ಸಲಹೆಯನ್ನು ಸ್ವೀಕರಿಸಿದ್ದೇವೆ. ಪ್ರತಿಪಕ್ಷ ನಾಯಕರ ಸಲಹೆಯಂತೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ ಕುರಿತಾಗಿ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು. ಕೊರೋನಾ ಸೋಂಕನ್ನು ಕಡಿಮೆ ಮಾಡಲು ಜನರು ಸಹಕಾರ ನೀಡಬೇಕು. ಕೆಲವು ಕಠಿಣ ನಿಯಮಗಳ ಜಾರಿ ಅನಿರ್ಯ. ಕಷ್ಟವಾದರೂ ಸಹ ಜನರು ಸಹಕಾರ ನೀಡಬೇಕು ಎಂದು ಹೇಳುವ ಮೂಲಕ ಕಠಿಣ ನಿಯಮಗಳು ಜಾರಿಯಾಗುವುದು ನಿಶ್ಚಿತ ಎಂಬ ಸುಳಿವು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post