ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೆ Lok Sabha election ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 40 ಪ್ರಮುಖರ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 10 ಮಂದಿ ಕೇಂದ್ರ ಸಚಿವರು, ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯ ನಾಯಕರು ಇದ್ದಾರೆ.
ಅತ್ಯಂತ ಪ್ರಮುಖವಾಗಿ ಈ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಲಾದ ರಾಜ್ಯದ ಬಿಜೆಪಿಯ ಹಿರಿಯ ನಾಯಕರನ್ನು ಸಾರ್ ಪ್ರಚಾರಕರು ಎಂದು ಹೆಸರಿಸಲಾಗಿದೆ.
Also read: ಏಪ್ರಿಲ್ 3ರಂದು ಮೈಸೂರಿನಿಂದ ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ
ಇವರುಗಳು ರಾಜ್ಯದಲ್ಲಿ ಸಭೆಗಳು, ಸಮಾವೇಶಗಳು ಮತ್ತು ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ.
ಯಾರೆಲ್ಲಾ ಪ್ರಚಾರಕರು?
ಪ್ರಧಾನಿ ನರೇಂದ್ರ ಮೋದಿ, #PM Narendra Modi ಗೃಹ ಸಚಿವ ಅಮಿತ್ ಶಾ, #Amith Shah ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ, ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಸ್ಮೃತಿ ಇರಾನಿ, ನಿತಿನ್ ಗಡ್ಕರಿ, ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಬಿಎಸ್ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಹಿರಿಯ ಮುಖಂಡ ಸುಧಾಕರ ರೆಡ್ಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್. ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಬಿ. ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ. ಸುನೀಲ್ ಕುಮಾರ್, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರನ್ನು ಸಹ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post