ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಸಿಬಿ ರದ್ದುಗೊಂಡ ನಂತರ ಲೋಕಾಯುಕ್ತ Lokayuktha ತನ್ನ ಕಾರ್ಯವನ್ನು ಆರಂಭಿಸಿದ್ದು, ಇಂದು ಮೊದಲ ದಾಳಿ ನಡೆಸಿ, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಅವರ ಪಿಎ ಉಮೇಶ್ ಎನ್ನುವವರನ್ನು ಬಂಧಿಸಿದೆ.
ಮಂಜುನಾಥ್ ಎನ್ನುವವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುವ ವಿಚಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಡಿವೈಎಸ್’ಪಿ ಮಂಜಯ್ಯ, ಶಂಕರ್ ನಾರಾಯಣ್, ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದ ಲೋಕಾಯುಕ್ತ ತಂಡ ಮಲ್ಲೇಶ್ವರಂನಲ್ಲಿರುವ ಪಶ್ಚಿಮ ವಿಭಾಗ ಬಿಬಿಎಂಪಿ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಬಿಎಂಪಿ ಜಂಟಿ ಆಯುಕ್ತ ಎಸ್.ಎಂ. ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Also read: ಭದ್ರಾವತಿಯಲ್ಲೊಂದು ಘೋರ ದುರಂತ: ರೈಲು ಹತ್ತುವಾಗ ಕೆಳಗೆ ಬಿದ್ದು ತಂದೆ, ಮಗ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post