ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಲವ್ ಜಿಹಾದ್ ಲಿಂಕ್ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ #R Ashok ಆರೋಪಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ #Love Jihad ಪೂರ್ವ ನಿಯೋಜಿತವಾಗಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ. ಕಾಂಗ್ರೆಸ್ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂತಹವರಿಗೆ ಬಂದಿದೆ ಎಂದು ದೂರಿದ್ದಾರೆ.
ಕೇರಳದಲ್ಲಿ ಲವ್ ಜಿಹಾದ್ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದು ಕಿಡಿ ಕಾರಿದರು.
Also read: ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ
ಕೊಲೆ ಆರೋಪಿ ನಟ ದರ್ಶನ್ #Darshan ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು? ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟು, ಕಾಫಿ, ಮಾದಕ ವಸ್ತು ನೀಡಲಾಗುತ್ತಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಕುಸಿದುಹೋಗಿದೆ. ಅತ್ಯಾಚಾರ, ಕೊಲೆ ಹೆಚ್ಚಿದೆ. ಸರ್ಕಾರ ಉಳಿಯುತ್ತೋ, ಇರುತ್ತೋ ಎಂದೇ ಶಾಸಕರು, ಸಚಿವರು ಚಿಂತೆ ಮಾಡುತ್ತಿದ್ದಾರೆ. ಜೈಲಿನಲ್ಲಾದ ಈ ಘಟನೆಗೆ ಸರ್ಕಾರ ಸರಿಯಾದ ಉತ್ತರ ನೀಡಬೇಕು. ತನಿಖೆ ಮಾಡುತ್ತೇವೆ ಎಂದರೆ ಏನೂ ಉಪಯೋಗವಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ವಿರುದ್ಧದ ತನಿಖೆ ಸಂಬಂಧ ಬಿಜೆಪಿ-ಜೆಡಿಎಸ್‘ನಿಂದ ಕಾನೂನು ಹೋರಾಟ ಮಾಡಲು ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಭ್ರಷ್ಟಾಚಾರದ ವಿರುದ್ಧದ ಹೋರಾಟವೂ ಮುಂದುವರಿಯಲಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post