ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ. ಹೆಗಡೆ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ನಾಡು ಕಂಡ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರಾಗಿದ್ದ ಎಂ.ಎ. ಹೆಗಡೆ ಅವರು ಕೊರೋನಾ ಸೋಂಕಿನಿಂದ ನಿಧನರಾಗಿದ್ದು ದುರಾದೃಷ್ಟಕರ. ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದರು, ಅವರು ರೂಪಿಸಿದ್ದ ಮಾತಿನ ಮಂಟಪ ಕಾರ್ಯಕ್ರಮ ಅತ್ಯಂತ ಜನಪ್ರಿಯವಾಗಿತ್ತು, ಅವರ ಅಕಾಲಿಕ ನಿಧನದಿಂದ ನಿಜಕ್ಕೂ ಸಾಂಸ್ಕೃತಿಕ ಲೋಕ ಒಂದು ದಿಗ್ಗಜ ವ್ಯಕ್ತಿತ್ವವನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.

ಸ್ವತಃ ಪಾತ್ರಧಾರಿಯು ಆಗಿದ್ದ ಹೆಗಡೆಯವರು 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಸೀತ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಮುಂತಾದವು ಅವರ ಜನಪ್ರಿಯ ಪ್ರಸಂಗಗಳು. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ರಚಿಸಿದ್ದಾರೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post