ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಚಿವ ಮಧು ಬಂಗಾರಪ್ಪ Minister Madhu Bangarappa ಅವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ MLA Beluru Gopalakrishna ಸ್ವಪಕ್ಷೀಯ ಸಚಿವರ ವಿರುದ್ಧವೇ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಧು ಬಂಗಾರಪ್ಪ ಅವರಿಗೆ ಅಹಂ ಹೆಚ್ಚಾಗಿದೆ. ಎಲ್ಲಾ ಉಸ್ತುವಾರಿ ಸಚಿವರು ಸರಿಯಾಗಿದ್ದಾರೆ. ಆದರೆ, ನಮ್ಮ ಉಸ್ತುವಾರಿ ಸಚಿವರಿಗೆ ಮಾತ್ರ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ? ನಮಗೂ ಜವಾಬ್ದಾರಿ ಇಲ್ವಾ? ನಾವೂ ಯಡಿಯೂರಪ್ಪನ ಮಕ್ಕಳನ್ನು ಸೋಲಿಸಬೇಕು ಅಂತಾ ಇದ್ದೇವೆ. ರಾಘವೇಂದ್ರನ ಸೋಲಿಸಬೇಕು ಎಂದು ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಮಾಜಿ ಮುಖ್ಯಮಂತ್ರಿಯವರ ಮಗನಾದ ಮಧು ಬಂಗಾರಪ್ಪ, ಅವರ ತಂದೆಯ ಗರಡಿಯಲ್ಲಿ ಪಳಗಿದವರು. ಇಂತಹವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು. ಅವರೇ ಪಕ್ಷ ಒಡೆಯುವುದಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ ಎಂದರು.
Also read: ಬಡವರ ಮತಾಂತರ ಯತ್ನ ಆರೋಪ: 42 ಮಂದಿ ವಿರುದ್ಧ ಪ್ರಕರಣ: 9 ಮಂದಿ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post