ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ #Shobha Karndlaje ಅವರ ಕಾರು ಅಪಘಾತಕ್ಕೀಡಗಿದ್ದು, ಘಟನೆಯಲ್ಲಿ ಬೈಕ್ ಸವಾರನೊಬ್ಬರ ಮೃತಪಟ್ಟ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್(35) ಎಂದು ಗುರುತಿಸಲಾಗಿದೆ.
ಕೆಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Also read: 28 ಸ್ಥಾನವನ್ನೂ ಗೆಲ್ಲುತ್ತೇವೆ, ಕಾಂಗ್ರೆಸ್ ದಿಕ್ಕಾಪಾಲಾಗುತ್ತದೆ | ವಿಜಯೇಂದ್ರ ಟಾಂಗ್
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಣಕ್ಕಿಳಿದಿದ್ದು, ಅವರು ಇಂದು ಕ್ಷೇತ್ರದಲ್ಲಿ ರ್ಯಾಲಿ ನಡೆಸುವಾಗ ಅಪಘಾತ ಸಂಭವಿಸಿದೆ. ಕೆಆರ್ ಪುರದ ಗಣೇಶ ದೇಗುಲದ ಬಳಿ ಈ ಘಟನೆ ನಡೆದಿದೆ.
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್’ನಲ್ಲಿ ಬಂದ ಪ್ರಕಾಶ್ ಕಾರಿನ ಡೋರ್’ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಪ್ರಕಾಶ್ ಅವರನ್ನು ಕೆ ಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post