No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿದೇಶಗಳಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಸುಧಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 30, 2021
in ಬೆಂಗಳೂರು ನಗರ
0
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಧಾನಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ. ಯಾವುದೇ ದೇಶಗಳಿಂದ ಬಂದ ಪ್ರಯಾಣಿಕರಿಗೂ ಪರೀಕ್ಷೆ ನಡೆಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ವಿದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ನೆಗೆಟಿವ್ ಇದ್ದವರಿಗೆ ಏಳು ದಿನಗಳ ಕಾಲ ಮನೆ ಕ್ವಾರಂಟೈನ್ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೂ, ನೆಗೆಟಿವ್ ಆದವರಿಗೆ 5ನೇ ದಿನ ಮತ್ತೆ ಮನೆಯಲ್ಲೇ ಪರೀಕ್ಷೆ ಮಾಡಲಾಗುತ್ತದೆ. ಎ ಸಿಂಪ್ಟಮ್ಯಾಟಿಕ್ ಆದವರಿಗೆ 7 ನೇ ದಿನ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್ ಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಆದರೆ ಇಂಥವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ವಿವರಿಸಿದರು.

ಜಗತ್ತಿನ 12 ದೇಶಗಳಲ್ಲಿ ಕೋವಿಡ್ ನ ಹೊಸ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ರಾಜ್ಯದಲ್ಲೂ ಇದು ಬರಬಹುದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜನಸಂಖ್ಯೆ, ಆರೋಗ್ಯ ಮೂಲಸೌಕರ್ಯಗಳನ್ನು ಪರಿಗಣಿಸಿದರೆ ಬೇರೆ ದೇಶಗಳಿಗಿಂತ ನಾವು ಹೆಚ್ಚು ಎಚ್ಚರ ವಹಿಸಬೇಕಾಗುತ್ತದೆ. ಇದಕ್ಕಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಮಾಡಬೇಕಿರುವ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಹಾಸಿಗೆ, ಆಕ್ಸಿಜನ್ ಹಾಸಿಗೆ, ವೈದ್ಯರು ಹಾಗೂ ಅಧಿಕಾರಿಗಳ ನಿಯೋಜನೆ, ಔಷಧಿ ಪೂರೈಕೆ ಮೊದಲಾದವುಗಳ ಬಗ್ಗೆ ಚರ್ಚೆಯಾಗಿದೆ. ಜನರು ಸುರಕ್ಷಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಬೇಕಿದೆ. ಇದಕ್ಕಾಗಿ ಕೆಲ ಕ್ರಮಗಳನ್ನು ವಹಿಸಬೇಕೆಂದು ಸಲಹೆ ನೀಡಲಾಗಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು 41 ಲಕ್ಷ ಜನರು ಪಡೆಯಬೇಕಿದೆ. ಇದಕ್ಕಾಗಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಂದಲೂ ಮಾದರಿಗಳನ್ನು ಪಡೆಯುತ್ತಿದೆ. ಪ್ರತಿ ಪ್ರಯಾಣಿಕರ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ಚಿಕಿತ್ಸೆಗೆ ಮಾರ್ಗಸೂಚಿ:
ಓಮಿಕ್ರಾನ್ ವೈರಾಣು ಬಂದರೆ ಯಾವ ರೀತಿ ಎದುರಿಸಬೇಕು, ಹೇಗೆ ನಿಯಂತ್ರಿಸಬೇಕು, ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಸಿದ್ಧತೆಗಳು ಹೇಗಿದೆ ಎಂದು ಚರ್ಚಿಸಲಾಗಿದೆ. ಕ್ವಾರಂಟೈನ್ ಆ್ಯಪ್, ಟೆಲಿ ಮೆಡಿಸಿನ್ ಮೊದಲಾದ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಚರ್ಚೆಯಾಗಿದೆ. ಜೊತೆಗೆ ಚಿಕಿತ್ಸೆಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಲು 10 ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಯಾವ ರೀತಿ ಚಿಕಿತ್ಸೆ ನೀಡಬೇಕೆಂದು ನಿಯಮ ರೂಪಿಸಲಿದೆ ಎಂದರು.
ಇತರೆ ಅಂಶಗಳು:

  • ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆಯಿರಿ.
  • ನಿರ್ದಿಷ್ಟ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೆಲ ನಿರ್ಬಂಧ ಹೇರುವಂತೆ ಮುಖ್ಯಮಂತ್ರಿಗಳು ಪ್ರಧಾನಿಗಳು ಪತ್ರ ಬರೆಯಲಿದ್ದಾರೆ. ವೈರಾಣು ಹರಡುವಿಕೆಯನ್ನು ಆರಂಭಿಕ ಹಂತದಲ್ಲೇ ತಡೆಯಲು ಪ್ರಯತ್ನ.
  • ಎರಡನೇ ಡೋಸ್ ಪಡೆಯದವರಿಗೆ ಮಾಲ್, ಥಿಯೇಟರ್ ಗೆ ಪ್ರವೇಶ ಇಲ್ಲ, ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ವೆಚ್ಚ ಭರಿಸುವ ತೀರ್ಮಾನ ಹಿಂತೆಗೆತ ಮೊದಲಾದ ಸಲಹೆಗಳು ಬಂದಿವೆ. ಈ ಬಗ್ಗೆ ಇನ್ನೂ ಚರ್ಚಿಸಬೇಕಿದೆ.
  • ಇಎಸ್‍ಐ ಆಸ್ಪತ್ರೆಯಲ್ಲಿ ರೋಗಿಯ ಶವದ ಕುರಿತಾದ ಸಮಸ್ಯೆ ಗಮನಕ್ಕೆ ಬಂದಿದ್ದು, ಈ ರೀತಿಯ ನಿರ್ಲಕ್ಷ್ಯ ವಹಿಸಬಾರದಿತ್ತು. ಇದು ಬಹಳ ವಿಷಾದನೀಯ ಸಂಗತಿ. ಈ ಬಗ್ಗೆ ಸೂಚನೆ ನೀಡಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidCovid vaccinationDakshina Kannada NewsKannada NewsKannada News LiveKannada News WebsiteKannada WebsiteLatest News KannadaMinister SudhakarNews in KannadaNews KannadaRTPCRState Newsಆರ್ ಟಿಪಿಸಿಆರ್ಕೋವಿಡ್ಬೆಂಗಳೂರುಸಚಿವ ಸುಧಾಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

“ಅನುಗ್ರಹ ಆಂಜನೇಯ ಸ್ವಾಮಿ” ಸಾಕ್ಷ್ಯಚಿತ್ರ ಬಿಡುಗಡೆ

Next Post

ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ

ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL