ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಮಂಗಳೂರು |
ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ವರುಣನ ಅಬ್ಬರ ಆರಂಭವಾದ ಬೆನ್ನಲ್ಲೇ ಜೂನ್ 18ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖ ವರದಿ ಮಾಡಿದ್ದು, ರಾಜ್ಯದ ಆರು ಜಿಲ್ಲೆಗಳಲ್ಲಿ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದಾದ್ಯಂತ ಮಳೆಯಾಗುತ್ತಿದೆ.

ಇನ್ನು, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಾವಣಗೆರೆ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಜೂ.14ರ ವರೆಗೆ ವಿವಿಧ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದ್ದು, ಜೂನ್ 18ರವರೆಗೆ ರಾಜ್ಯದಾದ್ಯಂತ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.

ಇನ್ನು, ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದೆ.
Also read: ದಕ್ಷಿಣ ಕನ್ನಡ | ಬಿಜೆಪಿ ವಿಜಯೋತ್ಸವ ಬಳಿಕ ಇಬ್ಬರಿಗೆ ಚಾಕು ಇರಿತ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ವಿಜಯಪುರ, ಬಾಗಲಕೋಟೆ, ಬೆಂಗಳೂರು ಮತ್ತಿತರ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ.

ಇದೇ ವೇಳೆ, ಮರ ಬಿದ್ದು ಬೆಳಗಾವಿಯಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಮೂವರು ಮಳೆ ಸಂಬAಧಿ ಅನಾಹುತಕ್ಕೆ ಮೃತಪಟ್ಟಿದ್ದಾರೆ. ಬೆಳಗಾವಿಯ ಮೂಡಲಗಿ ತಾಲೂಕಿನ ಅವರಾದಿಯಲ್ಲಿ ಟ್ರಾಕ್ಟರ್’ವೊಂದು ಈ ನದಿಗೆ ಮಗುಚಿ ಬಿದ್ದು ಒಬ್ಬ ನಾಪತ್ತೆಯಾಗಿದ್ದಾನೆ.
ಟ್ರಾಕ್ಟರ್’ನಲ್ಲಿ10 ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಒಂಬತ್ತು ಮಂದಿ ಈಜಿ ದಡ ಸೇರಿದ್ದಾರೆ. ಇನ್ನು ಬೆಳಗುಂದಿ, ಕರ್ಲೆ ಗ್ರಾಮ ಸಂಪರ್ಕಿಸುವ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರಬಿದ್ದು ಸೋಮನಾಥ ಮುಚ್ಚಂಡಿಕರ (21) ಹಾಗೂ ವಿಠಲ ತಳವಾರ(20) ಎಂಬ ಯುವಕರು ಮೃತಪಟ್ಟಿದ್ದಾರೆ.
ಇನ್ನು, ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ವರಂಗದಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಂಕರ್ (65) ಎಂಬವರ ಮೇಲೆ ಅಡಕೆ ಮರ ಬಿದ್ದು ಮೃತಪಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post