ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಈ ಕೂಡಲೇ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಆಗ್ರಹಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಸರ್ಕಾರದ ಅನೀತಿ ಮತ್ತು ಅಧರ್ಮ ರಾಜಕಾರಣದ ವಿರುದ್ಧ ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಮತ್ತು ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಈಟಿ ನಿತಿನ್, ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳಾದ ಕುಮಾರೇಶ್, ಉಮೇಶ್ ಬಾಳೆಗುಂಡಿ, ಅರುಣ್ ನವುಲೆ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post