ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾವೇರಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ಗೆ Karnataka Bandh ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು.
ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ರಾಜಾಜಿನಗರದ ಭಾಷ್ಯಂ ಸರ್ಕಲ್’ನಿಂದ ರಾಮಮಂದಿರವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಮೇಟಿ, ಕಾವೇರಿ ನಮ್ಮ ನಾಡಿನ ಜೀವ ನದಿಯಾಗಿದ್ದು, ಈ ವರ್ಷ ಮಳೆಯ ಕೊರತೆಯಿಂದ ರಾಜ್ಯದಲ್ಲಿ ಮಳೆಯಾಗದೇ ಕಾವೇರಿ ಕಣಿವೆಯ ಡ್ಯಾಮ್ ಗಳು ಖಾಲಿಯಾಗಿವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಲಿದೆ ಎಂದರು.
Also read: ಫೋರ್ಟಿಸ್ ಆಸ್ಪತ್ರೆಯ ಸಾಧನೆ | ತಿರುಚಿದ್ದ ಹೃದಯ ಕವಾಟವನ್ನು ಟಿಎವಿಆರ್ ಮೂಲಕ ಬದಲಾವಣೆ
ರಾಜ್ಯ ಸರ್ಕಾರ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್’ನಲ್ಲಿ Supreme Court ಕಾನೂನಾತ್ಮಕ ಹೋರಾಟವನ್ನು ಪ್ರಬಲವಾಗಿ ನಡೆಸಬೇಕು. ಸಂಸದರೂ ಕೂಡ ರಾಜ್ಯದ ಪರವಾಗಿ ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಗಳು ಹೋರಾಟಗಾರರನ್ನು ಲಘುವಾಗಿ ತೆಗೆದುಕೊಳ್ಳಬಾರದು. ಕಾವೇರಿ Kaveri ವಿಚಾರದಲ್ಲಿ ಇಡಿ ರಾಜ್ಯ ಒಂದಾಗಿ ಹೋರಾಟ ನಡೆಸಿದ್ದು, ತಕ್ಷಣ ಕಾನೂನು ಹೋರಾಟ ತೀವ್ರಗೊಳಿಸಿ ಕಾವೇರಿ ಉಳಿಸಬೇಕು ಎಂದು ಆಗ್ರಹಿಸಿದರು.
(ವರದಿ: ಡಿಎಲ್. ಹರೀಶ್, ಬೆಂಗಳೂರು)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















