ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ನಡೆಯಲಿರುವ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರಸ್ತುತ ವರ್ಷ ರಾಜ್ಯದ 592 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post