No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಾತಿ ಜನಗಣತಿ ಅನುಷ್ಠಾನಕ್ಕೆ ಬಿಜೆಪಿ ಬೆಂಬಲ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 10, 2024
in ಬೆಂಗಳೂರು ನಗರ
0
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿರೋಧಪಕ್ಷದ ನಾಯಕ ಆರ್. ಅಶೋಕ್ #R Ashok ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ “ಅಂತ್ಯೋದಯ’’ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ, ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ.
2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ‍್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ. ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ.

ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿಯನ್ನು ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ, ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ-ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು.
ಕಾಂತರಾಜ್ ಆಯೋಗ ನಡೆಸಿದ್ದ ಜಾತಿಗಣತಿಯ ವರದಿ ಇಲ್ಲಿಯ ವರೆಗೆ ಬಿಡುಗಡೆಯಾಗಿಲ್ಲ. ನಾನು ಕೂಡಾ ಅದನ್ನು ಓದಿಲ್ಲ. ಹೀಗಿರುವಾಗ ಆರ್.ಅಶೋಕ್ ಅವರು ವರದಿ ಬಿಡುಗಡೆಯಾಗುವ ಮೊದಲೇ ಅದು ವೈಜ್ಞಾನಿಕವಾಗಿ ನಡೆದಿಲ್ಲ, ಅದರಲ್ಲಿ ತಪ್ಪುಗಳಿವೆ ಎಂದು ಆರೋಪಿಸುತ್ತಿದ್ದಾರೆ. ವರದಿ ಅವರಲ್ಲಿದೆಯೇ? ಯಾವ ಆಧಾರದಲ್ಲಿ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು.

ಈಗ ಏಕಾಏಕಿಯಾಗಿ ವರದಿಯನ್ನು ಬಿಡುಗಡೆಗೊಳಿಸುವ ನಿರ್ಧಾರ ಯಾಕೆ ಎಂದು ಆರ್.ಅಶೋಕ್ ಕೇಳುತ್ತಿದ್ದಾರೆ. ಇದೇನು ದಿಡೀರ್ ನಿರ್ಧಾರ ಅಲ್ಲ, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಇದರ ಬಗ್ಗೆ ಸಮಾಲೋಚನೆ ನಡೆಸುತ್ತಾ ಬಂದಿದ್ದೇವೆ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಉಳ್ಳವರು, ಯಾವುದೇ ಚರ್ಚೆ-ಸಂವಾದ ಇಲ್ಲದೆ ದಿಡೀರ್ ನಿರ್ಧಾರ ಕೈಗೊಳ್ಳುವ ಸರ್ವಾಧಿಕಾರಿ ಧೋರಣೆ ನಮ್ಮದ್ದಲ್ಲ. ಸಾರ್ವಜನಿಕ ತೀರ್ಮಾನಗಳನ್ನು ಸಹಮತ ಮೂಡಿಸುವ ಮೂಲಕ ಕೈಗೊಳ್ಳಬೇಕೆಂಬ ಅಭಿಪ್ರಾಯ ನಮ್ಮದಾಗಿದೆ. ಇದರಿಂದಾಗಿ ಸ್ವಲ್ಪ ವಿಳಂಬವಾಗಿದೆ ಅಷ್ಟೆ.
ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು ಆರ್.ಅಶೋಕ್ ಅವರು ಅಮಾಯಕರಂತೆ ಪ್ರಶ್ನಿಸಿದ್ದಾರೆ. ಸನ್ಮಾನ್ಯ ಅಶೋಕ್ ಅವರೇ, ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ, ಇದು ಕೇವಲ ಜಾತಿ ಜನಗಣತಿ ಅಲ್ಲ, ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದನ್ನು ಇಲ್ಲಿಯ ವರೆಗೆ ದಲಿತರಾಗಲಿ, ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ? ಜಾತಿ ಜನಗಣತಿ ವಿರುದ್ಧ ತಳ ಸಮುದಾಯಗಳನ್ನು ಎತ್ತಿಕಟ್ಟುವ ಉದ್ದೇಶ ನಿಮ್ಮದಾಗಿದ್ದರೆ ನಿಮಗೆ ನಿರಾಶೆ ಖಚಿತ.

Also read: ಯುವ ದಸರಾ | ಕಲಾವಿದ ಶಶಿಕುಮಾರ್‌ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ

ಜಾತಿ ಗಣತಿ ನನ್ನ ಕನಸಿನ ಕೂಸು ಎಂದು ಹೇಳಲು ಯಾವ ಹಿಂಜರಿಕೆಯೂ ಇಲ್ಲ. 1992ರಲ್ಲಿ ಸುಪ್ರೀಂ ಕೋರ್ಟ್ ಮಂಡಲ ವರದಿಗೆ ಸಂಬಂಧಿಸಿದಂತೆ ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಇದರಂತೆ 1995ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಜಾತಿಗಳ ಆಯೋಗವನ್ನು ರಚಿಸಿದ್ದೆ. 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಆದೇಶ ನೀಡಿದ್ದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನ ಎಂದು ಹೇಳಲು ನನಗೆ ಹೆಮ್ಮೆಯಿದೆ.

ಜಾತಿ ಗಣತಿ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುತ್ತಿರುವ ಆರ್. ಅಶೋಕ್ ಅವರು, ತಮ್ಮ ಪಕ್ಷ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿಯೂ ಜಾತಿಗಣತಿ ನಡೆಸುವ ಧೈರ್ಯವನ್ನು ಯಾಕೆ ಮಾಡಿಲ್ಲ? ಎನ್ನುವ ಪ್ರಶ್ನೆಗೆ ಉತ್ತರಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಜಾತಿಗಣತಿ ನಡೆಸುವುದನ್ನು ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಸೇರಿಸಿದೆ. ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೆ ಮತ್ತೆ ಅದನ್ನು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಬಿಜೆಪಿಗೆ ಜಾತಿಗಣತಿ ಬಗ್ಗೆ ತಕರಾರು ಇಲ್ಲದೆ ಇದ್ದರೆ ಪಕ್ಷದ ನಾಯಕರು ಯಾಕೆ ಇದಕ್ಕೆ ಸಹಮತ ವ್ಯಕ್ತಪಡಿಸದೆ ಅವರನ್ನು ಟೀಕಿಸುತ್ತಿದ್ದಾರೆ.

ಮೀಸಲಾತಿ ಬಗ್ಗೆಯಾಗಲಿ, ಒಟ್ಟು ಸಾಮಾಜಿಕ ನ್ಯಾಯದ ಬಗ್ಗೆಯಾಗಲಿ ಭಾರತೀಯ ಜನತಾ ಪಕ್ಷ ಮತ್ತು ಆರ್ ಎಸ್ ಎಸ್ ನಿಲುವು ಏನು ಎನ್ನುವುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ. ನೀವು ಯಾವ ವೇಷ ಧರಿಸಿ, ಬಣ್ಣ ಬಳಿದುಕೊಂಡು ಮಾತನಾಡಿದರೂ ನಿಮ್ಮ ಆಂತರ್ಯದ ಅಭಿಪ್ರಾಯ ಏನೆಂಬುದು ಜನರಿಗೆ ತಿಳಿದಿದೆ.
ಜಾತಿ ಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ ಆರ್.ಅಶೋಕ್ ಅವರೇ, ನೀವು ಇದೇ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಜನಗಣತಿಯ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವಂತೆ ಒತ್ತಡ ಹೇರಿ, ನಿಮ್ಮ ಬದ್ದತೆ ಮತ್ತು ಸತ್ಯಸಂಧತೆಯನ್ನು ಸಾಬೀತುಪಡಿಸಿ. ಇಲ್ಲದೆ ಇದ್ದರೆ ನೀವು ಕೂಡಾ ಇತ್ತೀಚೆಗೆ ನಿಮ್ಮ ಮೇಲೆ ಬಂದಿರುವ ಆರೋಪಗಳಿಂದ ತಪ್ಪಿಸಿಕೊಳ್ಳಲು ವಿನಾಕಾರಣ ಜಾತಿ ಜನಗಣತಿಯ ವಿವಾದವನ್ನು ಪ್ರಸ್ತಾಪಿಸುತ್ತಿದ್ದೀರಿ ಎಂದು ಆರೋಪಿಸಬೇಕಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR Ashokಆರ್. ಅಶೋಕ್ಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Share196Tweet123Send
Previous Post

ಯುವ ದಸರಾ | ಕಲಾವಿದ ಶಶಿಕುಮಾರ್‌ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ

Next Post

ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL