No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

kalpa News by kalpa News
February 22, 2021
in ಬೆಂಗಳೂರು ನಗರ, ರಾಜಕೀಯ
0
ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲೇ ಇಲಾಖೆಯಲ್ಲಿ ಹೊಸ ಸುಧಾರಣೆಗಳನ್ನು ಜಾರಿ ಮಾಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಇದೀಗ ಸಾವಿರಾರು ಜನರಿಗೆ ಆಶ್ರಯ ಒದಗಿಸುವ ಗ್ರಾನೈಟ್ ಕಲ್ಲು ಗಣಿಗುತ್ತಿಗೆಯನ್ನು ಹರಾಜು ರಹಿತ ನೀಡಿ ಹೊಸ ಅಧ್ಯಯನಕ್ಕೆ ಮುನ್ನುಡಿ ಬರೆದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಅವರ ಸತತ ಪರಿಶ್ರಮದ ಫಲವಾಗಿ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಲ್ಲು ಗಣಿಗುತ್ತಿಗೆಗೆ ಕೊನೆಗೂ ಚಾಲನೆ ಸಿಕ್ಕಿದ್ದು, ತುಮಕೂರು ಜಿಲ್ಲೆ ಶಿರಾ ತಾಲ್ಲೂಕು, ಮದ್ದಕ್ಕನಹಳ್ಳಿ ಗ್ರಾಮದ ಕಲ್ಲು ಕುಟಿಗರ ಸಹಕಾರ ಸಂಘಕ್ಕೆ (ಸರ್ವೆ ನಂ.12 12.20 ಎಕರೆ) ಗ್ರೇ ಗ್ರಾನೈಟ್ ಕಲ್ಲುಗಣಿ ನಡೆಸಲು ಸಚಿವ ಸಂಪುಟದಲ್ಲಿ ಅನುಮತಿ ನೀಡಲಾಗಿದೆ. ಇದರಿಂದಾಗಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಲಭಿಸಲಿದ್ದು, ಅವರ ಕುಟುಂಬಕ್ಕೂ ಪ್ರತ್ಯೇಕವಾಗಿ ಹಾಗೂ ಪರೋಕ್ಷವಾಗಿ ಆಶ್ರಯ ಸಿಗಲಿದೆ ಎಂದಿದ್ದಾರೆ.

ಕಲ್ಲು ಕುಟಿಗರ ಸಹಕಾರ ಸಂಘಕ್ಕೆ ಸಾರ್ವಜನಿಕ ಹಿತದೃಷ್ಟಿಯಿಂದ (ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 56ರಡಿ ವಿಶೇಷ ಪ್ರಕರಣವೆಂದು) ಪರಿಗಣಿಸಿ ಹರಾಜು ರಹಿತವಾಗಿ ಮಂಜೂರಾತಿ ಮಾಡಲು ಶುಕ್ರವಾರ ನಡೆದ ಸಂಪುಟ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನೊಂದಣಿ ಮಾಡಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದ ಈ ಸಂಘಕ್ಕೆ ಮಾನವೀಯತೆಯ ದೃಷ್ಟಿಯಿಂದ ಹರಾಜು ರಹಿತವಾಗಿ ಮಂಜೂರು ಮಾಡಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಜನಸ್ನೇಹಿ ಎಂಬುದನ್ನು ಸಚಿವ ನಿರಾಣಿ ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.
ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೂ ಜಿಡ್ಡುಗಟ್ಟಿರುವ ವ್ಯವಸ್ಥೆಗೆ ಮುಕ್ತಿ ಹಾಡಲು ಮುಂದಾಗಿರುವ ನಿರಾಣಿ ಅವರು, ಈ ಹಿಂದೆ ಇದೇ ಇಲಾಖೆಯ ಸಚಿವರುಗಳು ನಿರ್ಲಕ್ಷ್ಯ ಮಾಡಿದ್ದ ಕಡತಗಳನ್ನು ವಿಲೇವಾರಿ ಮಾಡಿ ಇಲಾಖೆಯನ್ನು ಜನಾನುರಾಗಿ ಮಾಡುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ನಿರ್ಲಕ್ಷ್ಯ ಮಾಡಿದ್ದ ಹಿಂದಿನ ಸಚಿವರು

ವಾಸ್ತವವಾಗಿ ಇದು ಎಂದೋ ಆಗಬೇಕಾಗಿದ್ದ ಕೆಲಸವಾಗಿತ್ತು. ಆದರೆ, ಈ ಹಿಂದೆ ಇದೇ ಇಲಾಖೆಯ ಸಚಿವರಾಗಿದ್ದ ಕೆಲವರು ಉದಾಸೀನ ತೋರಿದ್ದರಿಂದ ಮದ್ದಕ್ಕನಹಳ್ಳಿ ಕಲ್ಲು ಕುಟಿಗರ ಸಹಕಾರ ಸಂಘಕ್ಕೆ ಕಲ್ಲು ಗಣಿ ಗುತ್ತಿಗೆಯನ್ನು ಮಂಜೂರು ಮಾಡಬೇಕೆಂಬ ಪ್ರಸ್ತಾವನೆ ಹಲವು ವರ್ಷಗಳಿಂದ ಇಲಾಖೆಯ ಹಂತದಲ್ಲೇ ನೆನೆಗುದಿಗೆ ಬಿದ್ದಿತ್ತು.

ಇದರ ಬಗ್ಗೆ ಸವಿಸ್ತಾರವಾಗಿ ಅಧ್ಯಯನ ನಡೆಸಿದ ಸಚಿವರು, ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಜೊತೆಗೆ ಚರ್ಚೆಸಿ ಇದಕ್ಕೊಂದು ಪರಿಹಾರ ಒದಗಿಸಲೇಬೇಕು ಎಂಬ ದೃಢ ಸಂಕಲ್ಪ ಮಾಡಿದ ಪರಿಣಾಮ ಇಂದು ಕಾರ್ಯರೂಪಕ್ಕೆ ಬಂದಿದೆ.  ಸಂಘಕ್ಕೆ 1995ರಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ಗಣಿ ಗುತ್ತಿಗೆಯನ್ನು ಮಂಜೂರು ಮಾಡಿ, ಪುನಃ 20 ವರ್ಷಗಳ ಅವಧಿಗೆ ನವೀಕರಿಸಲಾಗಿತ್ತು. ಇದಾದ ಬಳಿಕ ಸಂಘವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಾರಣ ನಿಯಮದಂತೆ ನಾಲ್ಕು ತಿಂಗಳ ಅವಧಿಯೊಳಗೆ ನೋಂದಣಿ ಮಾಡಿಸಿ ಕೊಂಡಿರಲಿಲ್ಲ. ಈ ಕಾರಣದಿಂದಾಗಿ ಉಪನೋಂದಣಾಧಿಕಾರಿಗಳು 2015ರ ಡಿಸೆಂಬರ್ 29ರಂದು ನೊಂದಣಿ ಮಾಡಲು ಅವಕಾಶವಿಲ್ಲವೆಂದು ಹೇಳಿದ್ದರು ಎನ್ನಲಾಗಿದೆ.

ಬಳಿಕ ನೋಂದಣಿ ಮಾಡಿಸಿಕೊಳ್ಳಲು ಸಂಘವು 2015ರ ಡಿಸೆಂಬರ್ 29ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಸಂಘದ ಈ ಪ್ರಸ್ತಾವನೆಯ ಅಭಿಪ್ರಾಯ ಕೋರಿ ಕಾನೂನು ಇಲಾಖೆಗೆ ಸಲ್ಲಿಸಲಾಗಿತ್ತು. ನಂತರ ಕಾನೂನು ಇಲಾಖೆಯು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಆಡಳಿತಾತ್ಮಕ ನಿರ್ಣಯ ಕೈಗೊಳ್ಳುವಂತೆ ಸಲಹೆ ನೀಡಿ, ಈ ಗಣಿ ಗುತ್ತಿಗೆಯನ್ನು ಸದರಿ ಸಂಘಕ್ಕೆ ನೀಡುವುದರಿಂದ ಆರ್ಥಿಕ ಹೊರೆಯಾಗುವುದಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಪುನ: ಗುತ್ತಿಗೆಯನ್ನು ಸಂಘಕ್ಕೆ ಮರು ಮಂಜೂರು ಮಾಡಲು ಅಂದಿನ ಸಚಿವರು ಸೂಚಿಸಿದ್ದರೂ, ಸಂಘವು 1995 ರಿಂದ ಸ್ವಾಧೀನಕ್ಕೆ ನೀಡಲು ಕೋರಿತ್ತು. ಆದರೆ ಹಿಂದಿನ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ನಿಯಮಾವಳಿಗಳ ಪ್ರಕಾರ ಹಿಂದಿನ ದಿನಾಂಕದಿಂದ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದ್ದರು.

ಆದರೆ 2017 ತಿದ್ದುಪಡಿ ನಿಯಮ ಜಾರಿಯಾದ ನಂತರ ಮರು ಮಂಜೂರಾತಿಗೆ ಅವಕಾಶವಿರುತ್ತದೆ. ಆದ್ದರಿಂದ ಸದರಿ ಗಣಿಗುತ್ತಿಗೆಯನ್ನು ರದ್ದುಪಡಿಸಿ ಹರಾಜು ಮೂಲಕ ವಿಲೇವಾರಿ ಮಾಡಲು ಟಿಪ್ಪಣಿ ಮಂಡಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವರ ಅಭಿಪ್ರಾಯ ಭಿನ್ನವಾಗಿದ್ದರಿಂದ ಕಡತವನ್ನು ಮುಂದಿನ ನಿರ್ಣಯಕ್ಕೆ ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಲಾಗಿತ್ತು.

20.9.2018ರ ಸಚಿವ ಸಂಪುಟ ಸಭೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಡ್ವೊಕೇಟ್ ಜನರಲ್‌ರವರು ದಿನಾಂಕ 15.2.2019 ರಂದು ನೀಡಿದ ಅಭಿಪ್ರಾಯದಲ್ಲಿ ಸದರಿ ಕಲ್ಲುಗಣಿ ಗುತ್ತಿಗೆಯನ್ನು ಮರು ಮಂಜೂರು ಮಾಡಬಹುದಾಗಿ ತಿಳಿಸಿದ್ದಾರೆ.

ಇದೀಗ ಮುಖ್ಯಮಂತ್ರಿ ಹಾಗೂ ಸಚಿವರ ಸತತ ಪರಿಶ್ರಮದ ಫಲವಾಗಿ ಸಚಿವ ಸಂಪುಟ ಸಭೆಯಲ್ಲಿ ಗಣಿ ಗುತ್ತಿಗೆ ಮರು ಮಂಜೂರಾತಿ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreKannada News WebsiteLatest News KannadaLocal NewsPolitical NewsState Newsಬೆಂಗಳೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ: ಮನೆಗಳ್ಳತನ ಆರೋಪಿ ಬಂಧನ

Next Post

ಪೊಲೀಸರ ಕಾರ್ಯಾಚರಣೆ: ಭದ್ರಾವತಿ ಹೊಸಮನೆಯ ಮೊಬೈಲ್ ಕಳ್ಳನ ಬಂಧನ

kalpa News

kalpa News

Next Post
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಪೊಲೀಸರ ಕಾರ್ಯಾಚರಣೆ: ಭದ್ರಾವತಿ ಹೊಸಮನೆಯ ಮೊಬೈಲ್ ಕಳ್ಳನ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL