ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಆರೋಗ್ಯ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಸಂಪ್ರದಾಯಕ್ಕೆ ಸಚಿವ ಡಾ. ಕೆ. ಸುಧಾಕರ್ ನಾಂದಿ ಹಾಡಿದ್ದಾರೆ.
ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅವರನ್ನು ಸಚಿವ ಸುಧಾಕರ್ ಇಲಾಖೆಗೆ ಸ್ವಾಗತಿಸಿದ್ದಾರೆ.

ರಾಜ್ಯಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ನೇಮಕಗೊಳ್ಳುತ್ತಿರುವ ತಜ್ಞರು, ವೈದ್ಯರಲ್ಲದೆ ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲಾ ಜಿಲ್ಲೆಗಳ ಡಿಎಚ್ ಒ, ಟಿಎಚ್ ಒಗಳು ವರ್ಚುವಲ್ ವೇದಿಕೆ ಮೂಲಕ ಈ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.
ಭಾಷಣದಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲರಿಗೂ ವೃತ್ತಿ ಘನತೆ ಎತ್ತಿ ಹಿಡಿಯುವಂತೆ ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸಲು ಸಚಿವ ಸುಧಾಕರ್ ಕರೆ ನೀಡಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















