ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post