ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೆಟ್ರೋ ರೈಲು ನಿಲ್ದಾಣದ ರಸ್ತೆಯಲ್ಲಿ ಅತಿಯಾದ ವಾಹನ ಮತ್ತು ಜನ ಸಂಚಾರದಿಂದ ಉಂಟಾಗಿರುವ ತೊಂದರೆ ಸರಿಪಡಿಸುವ ನಿಟ್ಟಿನಲ್ಲಿ ಸ್ಥಳಿಯರ ಮನವಿ ಮೇರೆಗೆ ಕ್ಷೇತ್ರದ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಸ್ತೆ ಅಗಲೀಕರಣಕ್ಕೆ ಸೂಚನೆ ನೀಡಿದರು.

ಕಿರಿದಾದ ರಸ್ತೆಯಿಂದಾಗಿ ವಾಹನ ಮತ್ತು ಜನ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿರುವ ಕುರಿತು ಸ್ಥಳಿಯರು ಸಲ್ಲಿಸಿದ ಮನವಿಗೆ ಸ್ಪಂದಿಸಿ ಇಂದು ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಬಿಬಿಎಂಪಿ ಇಂಜಿನಿಯರ್‌ಗಳ ಜೊತೆ ಚರ್ಚೆ ನಡೆಸಿ ರಸ್ತೆ ಅಗಲೀಕರಣಗೊಳಿಸಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಲ್ಲೇಶ್ವರಂ ವಿಭಾಗದ ಎಸಿಪಿ ನಾಗೇಶ್, ಬಿಬಿಎಂಪಿ ಇಂಜಿನಿಯರ್ ತಿಮ್ಮರಸು, ಸ್ಥಳಿಯ ಮುಖಂಡರಾದ ವೆಂಕಟೇಶ್, ವೆಂಕಟೇಶ್ ಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















