ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಾಜಿ ರಾಜ್ಯಪಾಲ ಮತ್ತು ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದ ಎಮ್. ರಾಮಾ ಜೋಯಿಸ್ ಅವರು ನಿಧನರಾದ ಸುದ್ದಿ ತಿಳಿದು ನನಗೆ ತುಂಬಾ ಆಘಾತವಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ವ್ಯಕ್ಥಪಡಿಸಿದರು.
ರಾಮಾ ಜೋಯಿಸ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಮಾ ಜೋಯಿಸ್ ಅವರು ನಮ್ಮ ನಾಡಿನ ಜ್ವಲಂತ ಸಮಸ್ಯೆಗಳು ಉದ್ಭವಿಸಿದಾಗ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದರು. ನಾನು ಈ ಮಟ್ಟಕ್ಕೆ ಬೆಳೆಯುವುದಕ್ಕೆ ಜೋಯಿಸರ ಮಾರ್ಗದರ್ಶನವೇ ಕಾರಣ ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಅವರು ನನ್ನಂತೆ ನೂರಾರು ಕಾರ್ಯಕರ್ತರನ್ನು ಬೆಳೆಸಿದವರು ಎಂದು ಹೇಳಿದರು.
ರಾಜ್ಯಪಾಲರಾಗಿ, ಮುಖ್ಯ ನ್ಯಾಯಮೂರ್ತಿಗಳಾಗಿ, ರಾಜ್ಯಸಭಾ ಸದಸ್ಯರಾಗಿ ದಿವಂಗತರು ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದ್ದರು, ಅಷ್ಟೇ ಅಲ್ಲ ನಮ್ಮ ಬಿಜೆಪಿಗೆ ಹಿರಿಯ ಮಾರ್ಗದರ್ಶಕರಾಗಿದ್ದರು. ದಿವಂಗತರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲೆಂದು ನಾನು ಪ್ರಾರ್ಥಿಸುತ್ತೇನೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post