ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸಕ್ತ ವರ್ಷದ ಹಜ್ ಯಾತ್ರಿಕರ ಅಂತಿಮ ಹಂತದ ತಂಡಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ Minister Zameer Ahmed ಅವರು ಶುಭ ಕೋರಿ ಬೀಳ್ಕೊಟ್ಟರು.
ಹಜ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಈ ಬಾರಿಯ ಹಜ್ ಯಾತ್ರೆ ಎಲ್ಲರ ಸಹಕಾರದಿಂದ ವ್ಯವಸ್ಥಿತ ಆಯೋಜನೆಯಿಂದ ಯಶಸ್ವಿ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Also read: ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಕಾಂಗ್ರೆಸ್ ಗೂಬೆ ಕೂರಿಸುತ್ತಿದೆ: ಹೆಚ್‌ಡಿಕೆ ಟೀಕೆ
ಈ ಬಾರಿ 6200 ಮಂದಿ ಹಜ್ ಯಾತ್ರೆ ಕೈಗೊಂಡಿದ್ದು ಕೊನೆಯ ದಿನವಾದ ಇಂದು 140 ಯಾತ್ರಿಕರು ಹೊರಟಿದ್ದಾರೆ. ಒಟ್ಟು 51 ವಿಮಾನಗಳಲ್ಲಿ ಯಾತ್ರಿಕರು ಹೊರಟಿದ್ದಾರೆ. ಇದೊಂದು ಪುಣ್ಯದ ಕೆಲಸ, ನಿತ್ಯ ಯಾತ್ರಿಕರು ಹಾಗೂ ಅವರ ಕುಟುಂಬ ವರ್ಗ ಸೇರಿ 35 ಸಾವಿರ ಮಂದಿ ಸೇರಿ ಒಟ್ಟು 6 ಲಕ್ಷ ಜನರಿಗೆ ಊಟ-ತಿಂಡಿ ನನ್ನ ವೈಯಕ್ತಿಕ ವೆಚ್ಚದಲ್ಲಿ ಮಾಡುವ ಅವಕಾಶ ಒದಗಿ ಬಂದಿದ್ದು ನನ್ನ ಪುಣ್ಯ ಎಂದು ಹೇಳಿದರು.

ಹಜ್ ಸಚಿವ ರಹೀಮ್ ಖಾನ್, ಪರಿಷತ್ ಸದಸ್ಯ ಬಿ. ಎಂ. ಫಾರೂಕ್, ಹಜ್ ಸಮಿತಿ ಅಧ್ಯಕ್ಷ ರೌಫುದ್ದಿನ್ ಕಚೇರಿವಾಲಾ, ಮಾಜಿ ಅಧ್ಯಕ್ಷ ಜುಲ್ಫಿಕರ್ ಅಹಮದ್ ಟಿಪ್ಪು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫಾರಾಜ್ ಖಾನ್ ಮತ್ತಿತರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು











Discussion about this post