ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು #Krishna Bairegowda ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ #R Ashok ಟೀಕಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

Also read: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ | ಅವರ ತಂದೆ ಹೇಳಿದ್ದೇನು?
ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಸಚಿವರು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಗೂಬೆ ಕೂರಿಸುವ ಉದ್ದೇಶ ಮಾತ್ರ
ರಾಜ್ಯದ ಹಿತಾಸಕ್ತಿ ಕಾಪಾಡಬೇಕು, ರಾಜ್ಯದ ಬೊಕ್ಕಸಕ್ಕೆ ನಾಲ್ಕು ಕಾಸು ಹೆಚ್ಚು ಬರಬೇಕು ಎನ್ನುವ ಉದ್ದೇಶ ತಮಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ಇದ್ದಿದ್ದರೆ, ತಾವು ಮತ್ತು ತಮ್ಮ ಕಾಂಗ್ರೆಸ್ ಸರ್ಕಾರ, ಕೇಂದ್ರ ಸರ್ಕಾರದ ಜೊತೆ ವ್ಯವಹರಿಸುವ ರೀತಿಯೇ ಬೇರೆ ಇರುತ್ತಿತ್ತು. ಆದರೆ ಸತ್ಯ ಏನೆಂದರೆ, ನಿಮಗೆ ಅದ್ಯಾವ ಸದುದ್ದೇಶವೂ ಇಲ್ಲ. ತಮಗೆ ಬೇಕಾಗಿರುವುದೆಲ್ಲವೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮೇಲೆ ಗೊಬೆ ಕೂರಿಸುವುದು ಮಾತ್ರ. ಆ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು, ತಪ್ಪುಗಳನ್ನು ಮುಚ್ಚಿಕೊಳ್ಳುವುದು, ಜನರ ಗಮನ ಬೇರೆಡೆ ಸೆಳೆಯುವುದು, ಬಿಜೆಪಿ ವಿರುದ್ಧ ಒಂದು ಕಟ್ಟುಕಥೆ ಸೃಷ್ಟಿಸುವುದು ಇವರ ಉದ್ದೇಶ ಎಂದು ಅವರು ದೂರಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮನೆಹಾಳು ಕೆಲಸ ಮಾಡಬಾರದು. ಇವತ್ತು ನೀವು “ನಮ್ಮ ತೆರಿಗೆ ನಮ್ಮ ಹಕ್ಕು” ಎನ್ನುತ್ತೀರಿ. ನಾಳೆ ಬೆಂಗಳೂರಿನ ಜನತೆ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಮುಂದೊಂದು ದಿನ ಮಹದೇವಪುರದ ಜನ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗೆ ಮುಂದುವರಿದರೆ ಪ್ರತಿಯೊಂದು ಧರ್ಮ, ಜಾತಿಯವರು ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗಾದರೆ ಇದಕ್ಕೆ ಕೊನೆ ಎಲ್ಲಿ? ಎಂದು ಆರ್.ಅಶೋಕ ಪ್ರಶ್ನಿಸಿದ್ದಾರೆ.
ಇದೆಲ್ಲಾ ತಮಗೆ ಗೊತ್ತಿಲ್ಲ ಎಂದೇನಿಲ್ಲ. ಬಹುಶಃ ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಟವಲ್ ಹಾಕುತ್ತಿರಬಹುದು. ದುರಾಡಳಿತದಿಂದ ಬೇಸತ್ತಿರುವ ಕರ್ನಾಟಕಕ್ಕೆ ನಿಮ್ಮಂತಹ ಸುಶಿಕ್ಷಿತ, ಸಭ್ಯ, ಬುದ್ಧಿವಂತ ನಾಯಕರು ಮುಖ್ಯಮಂತ್ರಿ ಆದರೆ ಒಳ್ಳೆಯದೇ! ಆದರೆ ನಿಮ್ಮ ಕಾಂಗ್ರೆಸ್ ಹೈಕಮಾಂಡ್‌ಗೆ ಬೇಕಾಗಿರುವುದು ‘ಸಂಪನ್ಮೂಲ’ ಒದಗಿಸುವ ಮಹಾನಾಯಕರೇ ಹೊರತು ನಿಮ್ಮಂತಹ ಸಂಪನ್ಮೂಲ ವ್ಯಕ್ತಿಗಳಲ್ಲ. ಒಟ್ಟಿನಲ್ಲಿ ನಿಮಗೆ ಶುಭವಾಗಲಿ ಎಂದು ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post